ದಿನ ಭವಿಷ್ಯಬಾಲ್ಕನಿಯಿಂದಬಾಲ್ಕನೀ ಭವಿಷ್ಯ

ಬಾಲ್ಕನಿ ದಿನಭವಿಷ್ಯ: 15 ಮಾರ್ಚ್ 2019, ಶುಕ್ರವಾರ

ನಿಮ್ಮ ಭವಿಷ್ಯ ನಿಮ್ಮ ನಿಮ್ಮ ಕೈಯ್ಯಲ್ಲಿ……

ಮೇಷ

ವ್ಯವಹಾರ ನಿಮಿತ್ತ ಮಾಡಲಿರುವ ಪ್ರಯಾಣ ಲಾಭದಾಯಕವಾಗಲಿದೆ. ಕ್ರೀಡಾಪಟುಗಳಿಗೆ ಉತ್ತಮ ಪ್ರೋತ್ಸಾಹ ಸಿಗಲಿದೆ. ಬಂಧುಗಳೊಡನೆ ಅನಾವಶ್ಯಕ ವಾಗ್ವಾದ ಬೇಡ. ಆದಾಯದ ಮೂಲಗಳು ಹೆಚ್ಚಲಿವೆ. ಅಂತೆಯೇ ಖರ್ಚಿನ ದಾರಿಯು ಅಧಿಕವಾಗಿದೆ.ಕಾರ್ಯಭಾರವನ್ನು ತುಸು ಕಡಿಮೆ ಮಾಡಿಕೊಳ್ಳಿ. ಅತಿ ಕಾರ್ಯಭಾರವು ಅನಾರೋಗ್ಯಕ್ಕೆ ಕಾರಣವಾಗುವುದು. ಅನಿರೀಕ್ಷಿತ ಪ್ರಯಾಣದಿಂದಾಗಿ ಕುಲದೇವತಾ ದರ್ಶನವಾಗುವುದು. ಹಳೆಯ ಸ್ನೇಹಿತರಿಂದ ಸಕಾಲಿಕ ನೆರವು ದೊರೆಯಲಿದೆ.ವಿದ್ಯಾಭ್ಯಾಸದಲ್ಲಿ ಪ್ರಗತಿ ಕಂಡುಬರುವುದು. ಈ ಮುಂಚೆ ಬರೆದ ಪರೀಕ್ಷೆಯ ಫಲಿತಾಂಶವು ಬರುವ ಸಾಧ್ಯತೆ ಇರುವುದು. ಹಣಕಾಸಿನ ಪರಿಸ್ಥಿತಿಯು ಉತ್ತಮವಾಗಿದ್ದು, ಮನಸ್ಸಿನ ಶಾಂತಿಗಾಗಿ ಕುಲದೇವರ ಪ್ರಾರ್ಥನೆ ಮಾಡಿ.

ಅದೃಷ್ಟ ಸಂಖ್ಯೆ:2

ವೃಷಭ

ಶ್ರಮದಲ್ಲಿಯೇ ಹಿತ ಕಾಣುವ ನಿಮಗೆ ಯಶಸ್ಸು ನಿಶ್ಚಿತ. ಮತ್ತು ಅದರ ಫಲವನ್ನು ಶೀಘ್ರದಲ್ಲಿಯೇ ಕಂಡುಕೊಳ್ಳುವಿರಿ. ಕೆಲವೊಮ್ಮೆ ನಿಮ್ಮ ಅತಿಯಾದ ಲೆಕ್ಕಾಚಾರ ತಲೆಕೆಳಗಾಗುವ ಸಾಧ್ಯತೆ ಇರುವುದು. ಕುಟುಂಬದಲ್ಲಿ ಒಮ್ಮತ ಮೂಡುವುದು. ಮನೆಯಲ್ಲಿ ಬಹಳ ದಿನಗಳ ಮೇಲೆ ಸಂತಸದ ವಾತಾವರಣ ಮೂಡಿ ಬರಲಿದೆ. ಮಂಗಳ ಕಾರ್ಯಗಳಿಗೆ ಸಿದ್ಧತೆ ನಡೆಯಲಿದೆ. ಬಂಧುಗಳೊಡನೆ ವ್ಯವಹಾರಕ್ಕೆ ಸಂಬಂಧಪಟ್ಟಂತೆ ಸುದೀರ್ಘ ಚರ್ಚೆ ನಡೆಯಲಿದೆ. ಬರಲಿರುವ ಸಮಸ್ಯೆಗಳನ್ನು ಸಾವಧಾನ ಚಿತ್ತದಿಂದ ಎದುರಿಸಿ. ಗಾಬರಿಯಿಂದ ಗೊಂದಲ ಮಾಡಿಕೊಂಡಲ್ಲಿ ಸಮಸ್ಯೆಗಳು ಬೆಳೆಯುತ್ತಾ ಹೋಗಬಹುದೇ ವಿನಃ ಪರಿಹಾರವಾಗಲಾರವು. ಆರ್ಥಿಕ ಸ್ಥಿತಿಯಲ್ಲಿ ಸ್ಥಿರತೆ ಕಂಡು ಬರುವುದು.

ಅದೃಷ್ಟ ಸಂಖ್ಯೆ:1

ಮಿಥುನ

ಸಮಾಜದ ಸೇವೆ ನಿಮ್ಮಿಂದ ವಿಶೇಷವಾಗಿ ನಡೆದು ಸಮಾಜದಲ್ಲಿ ಮನ್ನಣೆಗಳಿಸುವಿರಿ. ಅನೇಕ ಸಭೆ ಸಮಾರಂಭಗಳಲ್ಲಿ ಭಾಗವಹಿಸಬೇಕಾಗುವುದು. ಸರ್ಕಾರದಿಂದ ಬರಬೇಕಾಗಿದ್ದ ಧನ ಸಹಾಯ ಇಷ್ಟರಲ್ಲೇ ನಿಮ್ಮ ಕೈ ಸೇರಲಿದೆ. ವೈಯಕ್ತಿಕ ಕೆಲಸಕಾರ್ಯಗಳಲ್ಲಿ ಯಶಸ್ಸು ಕಾಣುವಿರಿ. ನೌಕರಿ ಬದಲಾವಣೆ ಸಧ್ಯಕ್ಕೆ ಬೇಡವೇ ಬೇಡ. ಆದಷ್ಟು ಪ್ರಯಾಣದಲ್ಲಿ ಎಚ್ಚರಿಕೆ ಅಗತ್ಯ. ಆಂಜನೇಯ ಸ್ಮರಣೆ ಮಾಡಿ. ಆರ್ಥಿಕ ಸ್ಥಿತಿಯಲ್ಲಿ ಸ್ಥಿರತೆ ಕಂಡು ಬರುವುದು.ತಂದೆಯಿಂದ ಬಂದ ಬಳುವಳಿಯಾದ ಕುಲಕಸುಬನ್ನು ಯಾವುದೇ ಕಾರಣಕ್ಕೂ ಬದಲಾಯಿಸಲು ಹೋಗಬೇಡಿ. ಆದಾಯಕ್ಕೆ ಸದ್ಯಕ್ಕೆ ಕತ್ತರಿ ಬಿದ್ದರೂ ಮುಂದಿನ ದಿನಗಳಲ್ಲಿ ಒಳಿತಾಗುವುದು. ಹಿರಿಯರ ಸಕಾಲಿಕ ಎಚ್ಚರಿಕೆಯ ಮಾತುಗಳು ನಿಮಗೆ ದಾರಿದೀಪವಾಗುವುದು.

ಅದೃಷ್ಟ ಸಂಖ್ಯೆ:2

ಕಟಕ

ಹಲವು ಸನ್ನಿವೇಶಗಳಿಂದಾಗಿ ಮಾನಸಿಕ ಚಂಚಲತೆ ಕಾಡುವುದು. ಸಂಬಂಧಪಡದ ಭೂವಿವಾದದ ಒತ್ತಡದಿಂದಾಗಿ ಬಳಲಿಕೆ ಉಂಟಾಗುವುದು. ಗುರು-ಹಿರಿಯರ ಸಲಹೆಯನ್ನು ಸ್ವೀಕರಿಸಿ. ಹಣಕಾಸಿನ ಸ್ಥಿತಿ ಉತ್ತಮವಾಗಿರುವುದು. ಉದ್ಯೋಗಕ್ಕೆ ಸಂಬಂಧಪಟ್ಟಂತೆ ಲಾಭಗಳು ಹೆಚ್ಚಿದಷ್ಟೇ ಕಾರ್ಯ ಒತ್ತಡಗಳು ನಿಮ್ಮ ಮೇಲೆ ಹೆಚ್ಚಾಗಬಹುದು. ಈ ಸಂದರ್ಭದಲ್ಲಿ ಶಾಂತಚಿತ್ತತೆ ಕಾಪಾಡಿಕೊಳ್ಳಿ. ಪ್ರಸಂಗ ಬಂದಲ್ಲಿ ಸ್ನೇಹಿತರ ಸಲಹೆ ಸಹಾಯ ಪಡೆಯಿರಿ. ಎಲ್ಲವನ್ನೂ ನಿಭಾಯಿಸಬಲ್ಲೆನೆಂಬ ಅತಿಯಾದ ಆತ್ಮವಿಶ್ವಾಸ ಬೇಡ. ಮಕ್ಕಳು ತಮ್ಮ ನಡವಳಿಕೆಯಿಂದ ಹಿರಿಯರಿಗೆ ಮುಜುಗರವನ್ನುಂಟು ಮಾಡುವರು. ಕಾರ್ಯ ಒತ್ತಡದ ನಡುವೆಯೂ ಪರರಿಗೆ ಉಪಕಾರವನ್ನು ಮಾಡುವಿರಿ.

ಅದೃಷ್ಟ ಸಂಖ್ಯೆ:4

ಸಿಂಹ

ನೀವು ಸರ್ಕಾರಿ ಕೆಲಸಕಾರ್ಯದಲ್ಲಿ ಉನ್ನತ ಹುದ್ದೆಯಲ್ಲಿದ್ದರೆ ಮುಂಬಡ್ತಿ ಇಷ್ಟರಲ್ಲೆ ದೊರೆಯುವ ಸಾಧ್ಯತೆ ಇರುತ್ತವೆ. ಇದಕ್ಕೆಲ್ಲಾ ನಿಮ್ಮ ಪ್ರಾಮಾಣಿಕತೆ, ಶ್ರಮ ಹಾಗೂ ಶ್ರದ್ದೆಯೇ ಕಾರಣವಾಗುವುದು. ಅವರಿವರ ಮಾತುಗಳಿಗೆ ಕಿವಿಗೊಡದಿರಿ.ಕಳೆದು ಹೋಗಿದ್ದ ಅಥವಾ ನಿಮಗೆ ಬರಬೇಕಾದ ಹಣವು ಬರುವ ಸೂಚನೆ ನಿಮಗೆ ತಲುಪುವುದು. ಇದರಿಂದ ನಿಮ್ಮ ಆರ್ಥಿಕ ಸಂಕಷ್ಟಕ್ಕೆ ತೆರೆಬೀಳಲಿದೆ. ಪ್ರತಿಭಾವಂತರಿಗೆ ಉತ್ತಮ ಅವಕಾಶಗಳು ಬರುವುದು. ನಿಮ್ಮ ಕಾರ್ಯಾನುಭವ ಹಾಗೂ ಜಾಣತನ ಎಲ್ಲರ ಪ್ರಶಂಸೆಗೆ ಪಾತ್ರವಾಗಲಿದೆ. ಹಿರಿಯರ ಆರೋಗ್ಯದ ಬಗ್ಗೆ ವಿಶೇಷ ಗಮನವಿರಲಿ. ಏಕಾಂತದಿಂದ ಹೊರ ಬರಲು ಉತ್ತಮ ಗ್ರಂಥಗಳ ಓದುವಿಕೆಯು ಸಹಕಾರಿಯಾಗುವುದು.

ಅದೃಷ್ಟ ಸಂಖ್ಯೆ:5

ಕನ್ಯಾ

ನಿಮ್ಮ ಮಾತಿಗೂ ಕೃತಿಗೂ ಅಂತರವಿರದಿರಲಿ. ಕೆಲ ಗ್ರಹಗಳ ಸಂಚಾರದಿಂದ ನಿಮಗೆ ಅಧಿಕ ಒತ್ತಡ ಉಂಟಾಗುವುದು. ಹಾಗಾಗಿ ಆದಷ್ಟು ತಾಳ್ಮೆಯಿಂದ ಇರಿ. ಕುಲದೇವತಾ ಪ್ರಾರ್ಥನೆ ಮಾಡಿ. ಬೆನ್ನು ನೋವು ಅಥವಾ ಮಂಡಿನೋವು ಕಾಣಿಸಿಕೊಳ್ಳುವ ಸಾಧ್ಯತೆ ಇದೆ. ಕಾಲು ಕೆಜಿಯಷ್ಟು ತೊಗರಿಬೇಳೆಯನ್ನು ದಾನ ಮಾಡಿ ಮತ್ತು ಸುಬ್ರಹ್ಮಣ್ಯ ಸ್ವಾಮಿಯ ಪ್ರಾರ್ಥನೆ ಮಾಡಿ. ಸಂಗಾತಿಯ ಮಾತುಗಳಿಗೆ ಬೆಲೆ ಕೊಡುವುದು ಒಳ್ಳೆಯದು.ಧೈರ್ಯಂ ಸರ್ವತ್ರ ಸಾಧನಂ ಎಂದರು ಹಿರಿಯರು. ಆ ಧೈರ್ಯವೇ ನಿಮ್ಮ ಬಹುದೊಡ್ಡ ಆಸ್ತಿ. ಹೊಸ ಚಿಗುರು ಹಳೇ ಬೇರು ಕೂಡಿರಲು ಮರ ಸೊಗಸು ಎನ್ನುವಂತೆ ಹಳೆಯ ವಿಚಾರಗಳು ನಿಮಗೆ ಮುದವನ್ನುಂಟು ಮಾಡುವುದು.

ಅದೃಷ್ಟ ಸಂಖ್ಯೆ:6

ತುಲಾ

ಸಾಮಾಜಿಕ ಜೀವನದ ಹಿನ್ನೆಲೆಯಲ್ಲಿ ನಿಮಗೆ ಗೌರವ ಆದರಗಳು ದೊರೆಯುವುದು. ಈ ವಿಚಾರವು ನಿಮ್ಮ ವಿರೋಧಿಗಳಿಗೆ ನುಂಗಲಾರದ ತುತ್ತಾಗಿ ಪರಿಣಮಿಸುವುದು. ಜಯವಿರುವವರೆಗೂ ಭಯವಿಲ್ಲ. ಹಾಗಾಗಿ ನಿಮ್ಮ ಕಾರ್ಯದಲ್ಲಿ ತಲ್ಲೀನರಾಗಿ. ಧರ್ಮ, ನ್ಯಾಯ ಹಾಗೂ ಸತ್ಯಗಳನ್ನು ರಕ್ಷಿಸುವುದೇ ನಿಮ್ಮ ಮೊದಲನೆಯ ಆದ್ಯತೆ ಆಗಿರುವುದು. ಹಾಗಿದ್ದರೂ ನಿಮ್ಮ ಕೈ ಕೆಳಗೆ ಕೆಲಸ ಮಾಡುವ ಜನರು ನಿಮ್ಮನ್ನು ತಪ್ಪಾಗಿ ಅಥೈರ್‍ಸಿಕೊಂಡು ಕೆಲಸದಿಂದ ದೂರ ಸರಿಯುವರು. ಗುರು ಮಂತ್ರ ಪಠಿಸಿ. ನಿಮ್ಮ ಸೇವೆಯ ರೀತಿ ನೀತಿಗಳಿಂದ ಪ್ರಭಾವಿತರಾದ ಜನರು ನಿಮ್ಮನ್ನೆ ಮುಂದಿನ ಮುಖಂಡನಾಗಬೇಕೆಂದು ಪ್ರಾರ್ಥಿಸುವರು. ಇದು ಶುಭ ಸಮಾಚಾರವೇ ಆದರೂ ನಿಮ್ಮ ವೈಯಕ್ತಿಕ ಕೆಲಸ ಕಾರ್ಯಗಳನ್ನು ಮಾಡಲು ಅಡ್ಡಿವುಂಟಾಗುವುದು.

ಅದೃಷ್ಟ ಸಂಖ್ಯೆ:4

ವೃಶ್ಚಿಕ

ಕೆಲಸದ ಸ್ಥಳದಲ್ಲಿ ನಿಮ್ಮ ಹೆಗಲಿಗೆ ಹೊಸ ರೀತಿಯ ಜವಾಬ್ದಾರಿಗಳು ಏರಲಿವೆ. ಅಂತೆಯೇ ಸಾಕಷ್ಟು ಒತ್ತಡವೂ ಉಂಟಾಗುವ ಸಾಧ್ಯತೆ ಇದೆ. ಹಣಕಾಸಿನ ವಿಷಯದಲ್ಲಿ ನಿಷ್ಠುರತೆಯನ್ನು ತೋರದಿದ್ದಲ್ಲಿ ಮಹತ್ತರ ಸಮಸ್ಯೆಗಳಿಗೆ ಸಿಲುಕಿಕೊಳ್ಳುವಿರಿ.ವ್ಯರ್ಥವಾದ ಪ್ರಯತ್ನಗಳಿಂದ ಕಂಗೆಟ್ಟಿರುವ ನೀವು ಬೆಟ್ಟಿಂಗ್‌, ಜೂಜು ಇತ್ಯಾದಿಗಳಲ್ಲಿ ಹಣ ಹೂಡುವುದು ತರವಲ್ಲ. ಹಣವನ್ನು ಆದಷ್ಟು ಕಡಿಮೆ ಖರ್ಚು ಮಾಡುವುದು ಒಳ್ಳೆಯದು.ನಿಮ್ಮ ಕೈ ಕೆಳಗಿನ ಕೆಲಸಗಾರರನ್ನು ಸಂತೋಷಪಡಿಸಿ. ಆರ್ಥಿಕ ವಿಷಯಗಳಲ್ಲಿ ಎಚ್ಚರ ವಹಿಸುವುದು ಅಗತ್ಯ. ಗುರುಹಿರಿಯರ ಆಶೀರ್ವಾದ ಪಡೆಯಿರಿ. ಕುಲದೇವತಾ ಪ್ರಾರ್ಥನೆ ಮಾಡಿ.

ಅದೃಷ್ಟ ಸಂಖ್ಯೆ:5

ಧನುಸ್ಸು

ಅಧಿಕ ಶ್ರಮಕ್ಕೆ ತಕ್ಕಷ್ಟು ಆದಾಯವೂ ಬರುವುದರಿಂದ ಹಣಕಾಸಿನ ತೊಂದರೆ ಇರುವುದಿಲ್ಲ. ಹೊಸದೇನೋ ಒಂದು ನಿಮ್ಮ ಜೀವನವನ್ನು ಪ್ರವೇಶಿಸಲಿದ್ದು, ಇದರಿಂದ ಉತ್ತಮವಾಗುವುದು. ನೆರೆಹೊರೆಯವರೊಂದಿಗೆ ಸ್ನೇಹದಿಂದ ವರ್ತಿಸಿ. ಆರೋಗ್ಯದ ಎಚ್ಚರ ಇದ್ದರೆ ಸಾಕು. ಉಳಿದ ಕಿರಿಕಿರಿಗಳನ್ನು ನಿಯಂತ್ರಿಸಬಹುದು. ವಿಷ್ಣು ಸಹಸ್ರನಾಮ ಪಾರಾಯಣದಿಂದ ಸಂಕಷ್ಟ ದೂರವಾಗುವುದು. ಕಾರ್ಯಸಿದ್ಧಿಯ ಭಾವನಾತ್ಮಕ ದುಗುಡತೆಯಿಂದ ದೂರ ಉಳಿಯುವುದು ಒಳ್ಳೆಯದು. ಆರ್ಥಿಕ ಸ್ಥಿತಿ ಉತ್ತಮವಾಗಿರುವುದು.ಉತ್ತಮವಾದ ವಿಚಾರದಲ್ಲಿ ಕ್ಲಿಷ್ಟತೆ ಇದ್ದರೂ ಸರಳವಾಗಿ ನಿಭಾಯಿಸಿಕೊಂಡು ಹೋಗುವ ಶಕ್ತಿಯನ್ನು ಭಗವಂತ ನಿಮಗೆ ಒದಗಿಸಿದ್ದಾನೆ. ನಿಮ್ಮಿಂದ ಮಾರ್ಗದರ್ಶನ ಪಡೆಯುವವರಿಗೆ ಬೇಕಾದ ನಿಮ್ಮ ಸಲಹೆ ಸೂಚನೆಗಳನ್ನು ನೀಡಿ.

ಅದೃಷ್ಟ ಸಂಖ್ಯೆ:4

ಮಕರ

ಮಾನಸಿಕ ಖಿನ್ನತೆ ಮೂಡುವುದು. ಅಕ್ಕಿ ಮತ್ತು ಬೆಲ್ಲವನ್ನು ಹಸುವಿಗೆ ನೀಡಿ ಮಹತ್ತರ ಕೆಲಸವನ್ನು ಮುಂದಕ್ಕೆ ಹಾಕುವುದು ಒಳ್ಳೆಯದು. ಶಿವ ಮತ್ತು ಆಂಜನೇಯ ಸ್ತುತಿ ಪಠಿಸಿ.ನೀವೇ ಮುಂದಾಗಿ ನಿಂತು ನಡೆಸುವ ಕೆಲಸಕ್ಕೆ ಮನಸ್ಸಿನ ಸಿದ್ಧತೆ ಬೇಕಾಗುವುದು. ಏಕಾಗ್ರತೆಯಿಂದ ಕೆಲಸವನ್ನು ಆರಂಭಿಸಿ. ಮನೋಕಾಮನೆಗಳು ಪೂರ್ಣಗೊಳ್ಳುವುದು ಆದಷ್ಟು ತಾಳ್ಮೆಯಿಂದಿರಿ.ಆರಾಧನಾ ದೃಷ್ಟಿಯಿಂದಲೇ ಅತಿಥಿಯನ್ನು ಸ್ವೀಕರಿಸಿರಿ ಮತ್ತು ಅವರ ಸೇವೆಯನ್ನು ಮಾಡಿ. ಇದರಿಂದ ನಿಮ್ಮ ಮನಃಕ್ಷೋಭೆಯು ತಿಳಿಗೊಳ್ಳುವುದು. ಆರ್ಥಿಕ ಪರಿಸ್ಥಿತಿ ಸಾಧಾರಣವಿದ್ದು, ಅನಗತ್ಯ ಖರ್ಚುಗಳಿಗೆ ಕಡಿವಾಣ ಹಾಕಿ.

ಅದೃಷ್ಟ ಸಂಖ್ಯೆ:4

ಕುಂಭ

ಕಚೇರಿಯ ಕೆಲಸಕಾರ್ಯಗಳನ್ನು ವಿವೇಚನೆಯಿಲ್ಲದೆ ಸರ್ರನೆ ಮಾಡಬೇಡಿ. ಇದರಿಂದ ಹೊಸ ಸಮಸ್ಯೆಯೊಂದು ಉದ್ಭವ ಆಗುವ ಸಾಧ್ಯತೆ ಇದೆ ಹಾಗಾಗಿ ಇಂದು ಮಾಡುವ ಕೆಲಸವನ್ನು ಮುಂದೂಡುವುದು ಒಳ್ಳೆಯದು. ಅಧಿಕ ಗಳಿಕೆಗೆ ಇಂದು ಶುಭದಿನವಾಗಿದೆ. ಅದು ಹಣಗಳಿಕೆಯಾಗಿರಬಹುದು. ಇಲ್ಲವೇ ವಿದ್ಯೆಯ ಗಳಿಕೆ ಆಗಿರಬಹುದು. ಇದರಿಂದ ಮಾನಸಿಕ ನೆಮ್ಮದಿ ದೊರೆಯಲಿದೆ ಮತ್ತು ಕೌಟುಂಬಿಕ ಜೀವನದಲ್ಲಿ ನೆಮ್ಮದಿಯ ವಾತಾವರಣ ಕಂಡು ಬರುವುದು.ಕೆಲ ಗ್ರಹಗಳ ಸಂಚಾರದಿಂದ ಇಂದಿನ ನಿಮ್ಮ ಕಾರ್ಯಗಳು ಅಡೆ-ತಡೆಯಿಲ್ಲದೆ ಮುಂದೆ ಸಾಗುವುದು. ಸಾರ್ವಜನಿಕ ಕ್ಷೇತ್ರಗಳಲ್ಲಿ ಸಂಘ ಸಂಸ್ಥೆಗಳಿಂದ ಸನ್ಮಾನ ದೊರೆಯುವ ಸಾಧ್ಯತೆ ಇರುವುದು. ಹಣಕಾಸು ಸ್ಥಿತಿ ಉತ್ತಮವಾಗಿರುತ್ತದೆ.

ಅದೃಷ್ಟ ಸಂಖ್ಯೆ:2

ಮೀನ

ಕೆಲವು ನಾಟಕೀಯ ಘಟನೆಗಳು ನಿಮ್ಮ ಸುತ್ತಮುತ್ತ ನಡೆಯುವ ಸಾಧ್ಯತೆ ಇದ್ದು, ಅದನ್ನೇ ನಿಜವೆನ್ನುವ ಭ್ರಮೆಗೆ ಒಳಗಾಗುವಿರಿ. ಈ ಭ್ರಮಾಲೋಕದಿಂದ ಹೊರಬಂದಲ್ಲಿ ನೈಜ ಜೀವನದ ದರ್ಶನವಾಗುವುದು. ಆರ್ಥಿಕ ಸ್ಥಿತಿ ಸಾಧಾರಣವಾಗಿರುತ್ತದೆ. ಅನೇಕ ರಕ್ಷ ಣಾವ್ಯೂಹಗಳನ್ನು ಹೆಣೆದು ಬಿಡಬೇಡಿ. ದೇವಿ ಆರಾಧನೆಯ ಜೊತೆಗೆ ಆಂಜನೇಯ ಸ್ತೋತ್ರವನ್ನು ಪಠಿಸಿ. ಪ್ರಯಾಣಕಾಲದಲ್ಲಿ ಎಚ್ಚರಿಕೆ ಅಗತ್ಯ ಖರ್ಚಿಗೆ ತಕ್ಕಷ್ಟು ಹಣ ಬರುವುದರಿಂದ ಈ ದಿನ ತೊಂದರೆ ಇರುವುದಿಲ್ಲ.ನೇರ ಮಾತುಗಾರರಾದ ನೀವು ಇಂದು ತಮಾಷೆಗಾಗಿ ಆಡಿದ ಮಾತಿನಿಂದ ಸಂಕಷ್ಟಕ್ಕೆ ಸಿಲುಕಿಕೊಳ್ಳುವಿರಿ. ಈ ಬಗ್ಗೆ ಎರಡು ಬಾರಿ ಚಿಂತಿಸಿ ಕಾರ್ಯಪ್ರವೃತ್ತರಾಗಿ. ಪ್ರಯಾಣದಲ್ಲಿ ಎಚ್ಚರಿಕೆ ಅಗತ್ಯ.

ಅದೃಷ್ಟ ಸಂಖ್ಯೆ:1

ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂ ನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತು ನೀವು ಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮ ಅನುಮಾನ ಹಾಗೂ ಆತಂಕಗಳನ್ನು ಅಳಿಸಬಹುದು ಮತ್ತು ಪ್ರಶ್ನೆಗಳಿಗೆ ಉತ್ತರಿಸಬಹುದು. ಮದುವೆ,ಸಂತಾನಕೊರತೆ ,ಶತ್ರುಕಾಟ, ಕುಜದೋಷ ಪರಿಣಾಮ, ಮಕ್ಕಳು ತೊಂದರೆ, ಸ್ತ್ರೀಪುರುಷ ಪ್ರೇಮವಿಚಾರ, ವಿದೇಶಿ ಯೋಗ, ಅನಾರೋಗ್ಯ, ಮನೆ ಕಟ್ಟುವ ಯೋಗ, ರಾಜಕೀಯದ ಭವಿಷ್ಯ, ಸ್ಥಾನಮಾನ ತೊಂದರೆ, ಕುಟುಂಬದಲ್ಲಿದ್ದ ಸಮಸ್ಯೆ, ಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ ಬಲಿಷ್ಟ ಪೂಜಾ ಶಕ್ತಿಯಿಂದ ಸರ್ವ ಗುಪ್ತ ಸಮಸ್ಯೆಗಳಿಗೆ ಶಾಶ್ವತ ಪರಿಹಾರ 9845743807 call/ whatsapp

ಪಂಡಿತ್ ಮಂಜುನಾಥ್ ಶಾಸ್ತ್ರೀ, ದೈವಜ್ಞ ಜ್ಯೋತಿಷ್ಯರು 9845743807

‘ಟಗರು’ ಸಂಭಾಷಣೆಕಾರ ಮಾಸ್ತಿ ಜೊತೆ ಬಾಲ್ಕನಿ ಚಿಟ್ ಚಾಟ್!!

#dinabhavishya #varabhavishya #astrology #jotishya

Tags

Related Articles