ದಿನ ಭವಿಷ್ಯಬಾಲ್ಕನಿಯಿಂದಬಾಲ್ಕನೀ ಭವಿಷ್ಯ

ಬಾಲ್ಕನಿ ದಿನಭವಿಷ್ಯ: 16 ಅಕ್ಟೋಬರ್ 2019, ಬುಧವಾರ

ನಿಮ್ಮ ಭವಿಷ್ಯ ನಿಮ್ಮ ನಿಮ್ಮ ಕೈಯ್ಯಲ್ಲಿ…

ಮೇಷ

ನೀವು ಸರ್ಕಾರಿ ಕೆಲಸಕಾರ್ಯದಲ್ಲಿ ಉನ್ನತ ಹುದ್ದೆಯಲ್ಲಿದ್ದರೆ ಮುಂಬಡ್ತಿ ಇಷ್ಟರಲ್ಲಿಯೇ  ದೊರೆಯುವ ಸಾಧ್ಯತೆ ಇರುತ್ತವೆ. ಇದಕ್ಕೆಲ್ಲಾ ನಿಮ್ಮ ಪ್ರಾಮಾಣಿಕತೆ, ಶ್ರಮ ಹಾಗೂ ಶ್ರದ್ದೆಯೇ ಕಾರಣವಾಗುವುದು. ಅವರಿವರ ಮಾತುಗಳಿಗೆ ಕಿವಿಗೊಡದಿರಿ. ಕಳೆದು ಹೋಗಿದ್ದ ಅಥವಾ ನಿಮಗೆ ಬರಬೇಕಾದ ಹಣವು ಬರುವ ಸೂಚನೆ ನಿಮಗೆ ತಲುಪುವುದು. ಇದರಿಂದ ನಿಮ್ಮ ಆರ್ಥಿಕ ಸಂಕಷ್ಟಕ್ಕೆ ತೆರೆಬೀಳಲಿದೆ. ಪ್ರತಿಭಾವಂತರಿಗೆ ಉತ್ತಮ ಅವಕಾಶಗಳು ಬರುವುದು. ನಿಮ್ಮ ಕಾರ್ಯಾನುಭವ ಹಾಗೂ ಜಾಣತನ ಎಲ್ಲರ ಪ್ರಶಂಸೆಗೆ ಪಾತ್ರವಾಗಲಿದೆ. ಹಿರಿಯರ ಆರೋಗ್ಯದ ಬಗ್ಗೆ ವಿಶೇಷ ಗಮನವಿರಲಿ. ಏಕಾಂತದಿಂದ ಹೊರ ಬರಲು ಉತ್ತಮ ಗ್ರಂಥಗಳ ಓದುವಿಕೆಯು ಸಹಕಾರಿಯಾಗುವುದು.
ಅದೃಷ್ಟ ಸಂಖ್ಯೆ:2

 

 

 

 

 

ವೃಷಭ

ನಿಮ್ಮ ಮಾತಿಗೂ ಕೃತಿಗೂ ಅಂತರವಿರದಿರಲಿ. ಕೆಲ ಗ್ರಹಗಳ ಸಂಚಾರದಿಂದ ನಿಮಗೆ ಅಧಿಕ ಒತ್ತಡ ಉಂಟಾಗುವುದು. ಹಾಗಾಗಿ ಆದಷ್ಟು ತಾಳ್ಮೆಯಿಂದ ಇರಿ. ಕುಲದೇವತಾ ಪ್ರಾರ್ಥನೆ ಮಾಡಿ. ಬೆನ್ನು ನೋವು ಅಥವಾ ಮಂಡಿನೋವು ಕಾಣಿಸಿಕೊಳ್ಳುವ ಸಾಧ್ಯತೆ ಇದೆ. ಕಾಲು ಕೆಜಿಯಷ್ಟು ತೊಗರಿಬೇಳೆಯನ್ನು ದಾನ ಮಾಡಿ ಮತ್ತು ಸುಬ್ರಹ್ಮಣ್ಯ ಸ್ವಾಮಿಯ ಪ್ರಾರ್ಥನೆ ಮಾಡಿ. ಸಂಗಾತಿಯ ಮಾತುಗಳಿಗೆ ಬೆಲೆ ಕೊಡುವುದು ಒಳ್ಳೆಯದು. ಧೈರ್ಯಂ ಸರ್ವತ್ರ ಸಾಧನಂ ಎಂದರು ಹಿರಿಯರು. ಆ ಧೈರ್ಯವೇ ನಿಮ್ಮ ಬಹುದೊಡ್ಡ ಆಸ್ತಿ. ಹೊಸ ಚಿಗುರು ಹಳೇ ಬೇರು ಕೂಡಿರಲು ಮರ ಸೊಗಸು ಎನ್ನುವಂತೆ ಹಳೆಯ ವಿಚಾರಗಳು ನಿಮಗೆ ಮುದವನ್ನುಂಟು ಮಾಡುವುದು.
ಅದೃಷ್ಟ ಸಂಖ್ಯೆ:1

 

 

 

 

 

 

ಮಿಥುನ

ಸಾಮಾಜಿಕ ಜೀವನದ ಹಿನ್ನೆಲೆಯಲ್ಲಿ ನಿಮಗೆ ಗೌರವ ಆದರಗಳು ದೊರೆಯುವುದು. ಈ ವಿಚಾರವು ನಿಮ್ಮ ವಿರೋಧಿಗಳಿಗೆ ನುಂಗಲಾರದ ತುತ್ತಾಗಿ ಪರಿಣಮಿಸುವುದು. ಜಯವಿರುವವರೆಗೂ ಭಯವಿಲ್ಲ. ಹಾಗಾಗಿ ನಿಮ್ಮ ಕಾರ್ಯದಲ್ಲಿ ತಲ್ಲೀನರಾಗಿ. ಧರ್ಮ, ನ್ಯಾಯ ಹಾಗೂ ಸತ್ಯಗಳನ್ನು ರಕ್ಷಿಸುವುದೇ ನಿಮ್ಮ ಮೊದಲನೆಯ ಆದ್ಯತೆ ಆಗಿರುವುದು. ಹಾಗಿದ್ದರೂ ನಿಮ್ಮ ಕೈ ಕೆಳಗೆ ಕೆಲಸ ಮಾಡುವ ಜನರು ನಿಮ್ಮನ್ನು ತಪ್ಪಾಗಿ ಅರ್ಥೈಸಿಕೊಂಡು ಕೆಲಸದಿಂದ ದೂರ ಸರಿಯುವರು. ಗುರು ಮಂತ್ರ ಪಠಿಸಿ.ನಿಮ್ಮ ಸೇವೆಯ ರೀತಿ ನೀತಿಗಳಿಂದ ಪ್ರಭಾವಿತರಾದ ಜನರು ನಿಮ್ಮನ್ನೆ ಮುಂದಿನ ಮುಖಂಡನಾಗಬೇಕೆಂದು ಪ್ರಾರ್ಥಿಸುವರು. ಇದು ಶುಭ ಸಮಾಚಾರವೇ ಆದರೂ ನಿಮ್ಮ ವೈಯಕ್ತಿಕ ಕೆಲಸ ಕಾರ್ಯಗಳನ್ನು ಮಾಡಲು ಅಡ್ಡಿವುಂಟಾಗುವುದು.
ಅದೃಷ್ಟ ಸಂಖ್ಯೆ:2

ಕಟಕ

ಕೆಲಸದ ಸ್ಥಳದಲ್ಲಿ ನಿಮ್ಮ ಹೆಗಲಿಗೆ ಹೊಸ ರೀತಿಯ ಜವಾಬ್ದಾರಿಗಳು ಏರಲಿವೆ. ಅಂತೆಯೇ ಸಾಕಷ್ಟು ಒತ್ತಡವೂ ಉಂಟಾಗುವ ಸಾಧ್ಯತೆ ಇದೆ. ಹಣಕಾಸಿನ ವಿಷಯದಲ್ಲಿ ನಿಷ್ಠುರತೆಯನ್ನು ತೋರದಿದ್ದಲ್ಲಿ ಮಹತ್ತರ ಸಮಸ್ಯೆಗಳಿಗೆ ಸಿಲುಕಿಕೊಳ್ಳುವಿರಿ. ವ್ಯರ್ಥವಾದ ಪ್ರಯತ್ನಗಳಿಂದ ಕಂಗೆಟ್ಟಿರುವ ನೀವು ಬೆಟ್ಟಿಂಗ್‌, ಜೂಜು ಇತ್ಯಾದಿಗಳಲ್ಲಿ ಹಣ ಹೂಡುವುದು ತರವಲ್ಲ. ಹಣವನ್ನು ಆದಷ್ಟು ಕಡಿಮೆ ಖರ್ಚು ಮಾಡುವುದು ಒಳ್ಳೆಯದು. ನಿಮ್ಮ ಕೈ ಕೆಳಗಿನ ಕೆಲಸಗಾರರನ್ನು ಸಂತೋಷಪಡಿಸಿ. ಆರ್ಥಿಕ ವಿಷಯಗಳಲ್ಲಿ ಎಚ್ಚರ ವಹಿಸುವುದು ಅಗತ್ಯ. ಗುರುಹಿರಿಯರ ಆಶೀರ್ವಾದ ಪಡೆಯಿರಿ. ಕುಲದೇವತಾ ಪ್ರಾರ್ಥನೆ ಮಾಡಿ.
ಅದೃಷ್ಟ ಸಂಖ್ಯೆ:4

 

 

 

 

 

ಸಿಂಹ

ಅಧಿಕ ಶ್ರಮಕ್ಕೆ ತಕ್ಕಷ್ಟು ಆದಾಯವೂ ಬರುವುದರಿಂದ ಹಣಕಾಸಿನ ತೊಂದರೆ ಇರುವುದಿಲ್ಲ. ಹೊಸದೇನೋ ಒಂದು ನಿಮ್ಮ ಜೀವನವನ್ನು ಪ್ರವೇಶಿಸಲಿದ್ದು, ಇದರಿಂದ ಉತ್ತಮವಾಗುವುದು. ನೆರೆಹೊರೆಯವರೊಂದಿಗೆ ಸ್ನೇಹದಿಂದ ವರ್ತಿಸಿ.ಆರೋಗ್ಯದ ಎಚ್ಚರ ಇದ್ದರೆ ಸಾಕು. ಉಳಿದ ಕಿರಿಕಿರಿಗಳನ್ನು ನಿಯಂತ್ರಿಸಬಹುದು. ವಿಷ್ಣು ಸಹಸ್ರನಾಮ ಪಾರಾಯಣದಿಂದ ಸಂಕಷ್ಟ ದೂರವಾಗುವುದು. ಕಾರ್ಯಸಿದ್ಧಿಯ ಭಾವನಾತ್ಮಕ ದುಗುಡತೆಯಿಂದ ದೂರ ಉಳಿಯುವುದು ಒಳ್ಳೆಯದು. ಆರ್ಥಿಕ ಸ್ಥಿತಿ ಉತ್ತಮವಾಗಿರುವುದು. ಉತ್ತಮವಾದ ವಿಚಾರದಲ್ಲಿ ಕ್ಲಿಷ್ಟತೆ ಇದ್ದರೂ ಸರಳವಾಗಿ ನಿಭಾಯಿಸಿಕೊಂಡು ಹೋಗುವ ಶಕ್ತಿಯನ್ನು ಭಗವಂತ ನಿಮಗೆ ಒದಗಿಸಿದ್ದಾನೆ. ನಿಮ್ಮಿಂದ ಮಾರ್ಗದರ್ಶನ ಪಡೆಯುವವರಿಗೆ ಬೇಕಾದ ನಿಮ್ಮ ಸಲಹೆ ಸೂಚನೆಗಳನ್ನು ನೀಡಿ.
ಅದೃಷ್ಟ ಸಂಖ್ಯೆ:5

 

 

 

ಕನ್ಯಾ

ಮಾನಸಿಕ ಖಿನ್ನತೆ ಮೂಡುವುದು. ಅಕ್ಕಿ ಮತ್ತು ಬೆಲ್ಲವನ್ನು ಹಸುವಿಗೆ ನೀಡಿ ಮಹತ್ತರ ಕೆಲಸವನ್ನು ಮುಂದಕ್ಕೆ ಹಾಕುವುದು ಒಳ್ಳೆಯದು. ಶಿವ ಮತ್ತು ಆಂಜನೇಯ ಸ್ತುತಿ ಪಠಿಸಿ.ನೀವೇ ಮುಂದಾಗಿ ನಿಂತು ನಡೆಸುವ ಕೆಲಸಕ್ಕೆ ಮನಸ್ಸಿನ ಸಿದ್ಧತೆ ಬೇಕಾಗುವುದು. ಏಕಾಗ್ರತೆಯಿಂದ ಕೆಲಸವನ್ನು ಆರಂಭಿಸಿ. ಮನೋಕಾಮನೆಗಳು ಪೂರ್ಣಗೊಳ್ಳುವುದು ಆದಷ್ಟು ತಾಳ್ಮೆಯಿಂದಿರಿ. ಆರಾಧನಾ ದೃಷ್ಟಿಯಿಂದಲೇ ಅತಿಥಿಯನ್ನು ಸ್ವೀಕರಿಸಿರಿ ಮತ್ತು ಅವರ ಸೇವೆಯನ್ನು ಮಾಡಿ. ಇದರಿಂದ ನಿಮ್ಮ ಮನಃಕ್ಷೋಭೆಯು ತಿಳಿಗೊಳ್ಳುವುದು. ಆರ್ಥಿಕ ಪರಿಸ್ಥಿತಿ ಸಾಧಾರಣವಿದ್ದು, ಅನಗತ್ಯ ಖರ್ಚುಗಳಿಗೆ ಕಡಿವಾಣ ಹಾಕಿ.
ಅದೃಷ್ಟ ಸಂಖ್ಯೆ:6

 

 

ತುಲಾ

ಕಚೇರಿಯ ಕೆಲಸಕಾರ್ಯಗಳನ್ನು ವಿವೇಚನೆಯಿಲ್ಲದೆ ಸರ್ರನೆ ಮಾಡಬೇಡಿ. ಇದರಿಂದ ಹೊಸ ಸಮಸ್ಯೆಯೊಂದು ಉದ್ಭವ ಆಗುವ ಸಾಧ್ಯತೆ ಇದೆ ಹಾಗಾಗಿ ಇಂದು ಮಾಡುವ ಕೆಲಸವನ್ನು ಮುಂದೂಡುವುದು ಒಳ್ಳೆಯದು. ಅಧಿಕ ಗಳಿಕೆಗೆ ಇಂದು ಶುಭದಿನವಾಗಿದೆ. ಅದು ಹಣಗಳಿಕೆಯಾಗಿರಬಹುದು. ಇಲ್ಲವೇ ವಿದ್ಯೆಯ ಗಳಿಕೆ ಆಗಿರಬಹುದು. ಇದರಿಂದ ಮಾನಸಿಕ ನೆಮ್ಮದಿ ದೊರೆಯಲಿದೆ ಮತ್ತು ಕೌಟುಂಬಿಕ ಜೀವನದಲ್ಲಿ ನೆಮ್ಮದಿಯ ವಾತಾವರಣ ಕಂಡು ಬರುವುದು.ಕೆಲ ಗ್ರಹಗಳ ಸಂಚಾರದಿಂದ ಇಂದಿನ ನಿಮ್ಮ ಕಾರ್ಯಗಳು ಅಡೆ-ತಡೆಯಿಲ್ಲದೆ ಮುಂದೆ ಸಾಗುವುದು. ಸಾರ್ವಜನಿಕ ಕ್ಷೇತ್ರಗಳಲ್ಲಿ ಸಂಘ ಸಂಸ್ಥೆಗಳಿಂದ ಸನ್ಮಾನ ದೊರೆಯುವ ಸಾಧ್ಯತೆ ಇರುವುದು. ಹಣಕಾಸು ಸ್ಥಿತಿ ಉತ್ತಮವಾಗಿರುತ್ತದೆ.
ಅದೃಷ್ಟ ಸಂಖ್ಯೆ:4

 

ವೃಶ್ಚಿಕ

ಕೆಲವು ನಾಟಕೀಯ ಘಟನೆಗಳು ನಿಮ್ಮ ಸುತ್ತಮುತ್ತ ನಡೆಯುವ ಸಾಧ್ಯತೆ ಇದ್ದು, ಅದನ್ನೇ ನಿಜವೆನ್ನುವ ಭ್ರಮೆಗೆ ಒಳಗಾಗುವಿರಿ. ಈ ಭ್ರಮಾಲೋಕದಿಂದ ಹೊರಬಂದಲ್ಲಿ ನೈಜ ಜೀವನದ ದರ್ಶನವಾಗುವುದು. ಆರ್ಥಿಕ ಸ್ಥಿತಿ ಸಾಧಾರಣವಾಗಿರುತ್ತದೆ. ಅನೇಕ ರಕ್ಷ ಣಾವ್ಯೂಹಗಳನ್ನು ಹೆಣೆದು ಬಿಡಬೇಡಿ. ದೇವಿ ಆರಾಧನೆಯ ಜೊತೆಗೆ ಆಂಜನೇಯ ಸ್ತೋತ್ರವನ್ನು ಪಠಿಸಿ. ಪ್ರಯಾಣ ಕಾಲದಲ್ಲಿ ಎಚ್ಚರಿಕೆ ಅಗತ್ಯ ಖರ್ಚಿಗೆ ತಕ್ಕಷ್ಟು ಹಣ ಬರುವುದರಿಂದ ಈ ದಿನ ತೊಂದರೆ ಇರುವುದಿಲ್ಲ. ನೇರ ಮಾತುಗಾರರಾದ ನೀವು ಇಂದು ತಮಾಷೆಗಾಗಿ ಆಡಿದ ಮಾತಿನಿಂದ ಸಂಕಷ್ಟಕ್ಕೆ ಸಿಲುಕಿಕೊಳ್ಳುವಿರಿ. ಈ ಬಗ್ಗೆ ಎರಡು ಬಾರಿ ಚಿಂತಿಸಿ ಕಾರ್ಯಪ್ರವೃತ್ತರಾಗಿ. ಪ್ರಯಾಣದಲ್ಲಿ ಎಚ್ಚರಿಕೆ ಅಗತ್ಯ
ಅದೃಷ್ಟ ಸಂಖ್ಯೆ:2

 

 

ಧನುಸ್ಸು

ಗತದಿನಗಳ ಅವಮಾನಗಳನ್ನು ನೆನಪಿಸಿಕೊಂಡು ಹಿಂಸೆಯನ್ನು ಅನುಭವಿಸದಿರಿ. ಹೊಸದಾದ ಸಂಕಲ್ಪ ನಿಮಗೆ ಹೊಸತನ ಮತ್ತು ಹೊಸ ಹುಮ್ಮಸ್ಸನ್ನು ಹುಟ್ಟುಹಾಕುವುದು. ಪ್ರಚಲಿತ ಸಮಸ್ಯೆಗಳಿಗೆ ಪರಿಹಾರ ಕಂಡುಕೊಳ್ಳಿ.ಮಾತಿನ ಬಗ್ಗೆ ಸದಾ ಜಾಗೃತಿಯನ್ನು ಹೊಂದಬೇಕಾಗುವುದು. ನೀವು ಆಡಿದ ತಮಾಷೆ ಮಾತು ಪತಿಪತ್ನಿಯರಲ್ಲಿ ವಿರಸವುಂಟು ಮಾಡುವ ಸಾಧ್ಯತೆ ಇದೆ. ಹಾಗಾಗಿ ಎರಡು ಬಾರಿ ಚಿಂತಿಸಿ ಮಾತನ್ನು ಆಡಿ. ಒಳಿತಾಗುವುದು.ಉತ್ತಮ ವಾಗ್ಮಿ ಆದ ನೀವು ಸಂದರ್ಭಕ್ಕೆ ತಕ್ಕಂತೆ ಮಾತನಾಡುವಿರಿ. ಹಾಗಾಗಿ ಪ್ರಭಾವಿ ವ್ಯಕ್ತಿಗಳು ನಿಮ್ಮ ಸಂಪರ್ಕಕ್ಕೆ ಬರುವರು ಮತ್ತು ಸಭೆ-ಸಮಾರಂಭಗಳಿಗೆ ನಿಮ್ಮನ್ನೆ ನಿರೂಪಕರನ್ನಾಗಿ ನೇಮಿಸುವ ಸಾಧ್ಯತೆ ಇರುತ್ತದೆ.
ಅದೃಷ್ಟ ಸಂಖ್ಯೆ:1

 

 

 

ಮಕರ

ಅನೇಕ ರೀತಿಯ ಜನರನ್ನು ಇಂದು ಭೇಟಿಯಾಗಲಿದ್ದೀರಿ. ಮನಸ್ಸಿನ ಗೊಂದಲವನ್ನು ನಿರ್ಮಿಸುವವರ ಬಗ್ಗೆ ವಿಶೇಷವಾದ ಎಚ್ಚರಿಕೆಯಿರಲಿ. ಕೆಲ ಗ್ರಹಗಳ ಸಂಚಾರವು ಮಕ್ಕಳ ವಿದ್ಯೆಯಲ್ಲಿ ಹಿನ್ನಡೆ ಉಂಟು ಮಾಡುವುದು. ಆತ್ಮವಿಮರ್ಶೆ ಮಾಡಿಕೊಳ್ಳುವುದು ಒಳಿತು. ಈ ಹಿಂದೆ ನಡೆದು ಹೋದ ಘಟನೆಗಳಿಗೆ ನೀವೆಷ್ಟು ಕಾರಣೀಭೂತರು ಎಂಬುದನ್ನು ಚಿಂತಿಸಿ. ಆದ ಅಚಾತುರ್ಯವನ್ನು ಪುನಃ ಮರುಕಳಿಸದಂತೆ ನೋಡಿಕೊಳ್ಳಿ.ಮನಸ್ಸನ್ನು ನಿಗ್ರಹಿಸುವಂತಹ ತುರ್ತು ಶಕ್ತಿಯನ್ನು ಸಂಪಾದಿಸಿಕೊಳ್ಳಿ. ಆಂಜನೇಯ ಮಂತ್ರವನ್ನು ಇಲ್ಲವೆ ಹನುಮಾನ್‌ ಚಾಲೀಸನ್ನು ತಪ್ಪದೆ ಪಠಿಸಿ. ನಿರ್ಧಾರಗಳನ್ನು ತಳೆಯುವಾಗ ಹಿರಿಯರ ಸಲಹೆಯನ್ನು ಸ್ವೀಕರಿಸಿ.
ಅದೃಷ್ಟ ಸಂಖ್ಯೆ:4

 

 

 

 

ಕುಂಭ

ನಿಮ್ಮ ಮನಸ್ಸನ್ನು ಘಾಸಿಗೊಳಿಸಿ ದುರ್ಬಲರನ್ನಾಗಿ ಮಾಡುವ ಜನರನ್ನು ಅಲಕ್ಷಿಸಿಬಿಡಿ. ನಿಮಗೆ ಧೈರ್ಯವನ್ನು ತುಂಬುವ ಮತ್ತು ಸಕಾರಾತ್ಮಕವಾಗಿ ಚಿಂತಿಸುವ ಜನರ ಸಂಪರ್ಕವನ್ನು ಹೊಂದಿ. ನಿಮ್ಮ ಮುಖದಲ್ಲಿ ಮಂದಹಾಸ ಮೂಡುವುದು.ಗೂಳಿಯಂತೆ ಮುನ್ನುಗ್ಗುವ ಸ್ವಭಾವ ತಪ್ಪೇನಲ್ಲ. ಆದರೆ ಎಲ್ಲದಕ್ಕೂ ಒಂದು ಇತಿಮಿತಿ ಇರುತ್ತದೆ. ಆತುರಗಾರನಿಗೆ ಬುದ್ಧಿಮಟ್ಟ ಕಡಿಮೆ ಎನ್ನುವಂತೆ ಎರಡೆರಡು ಬಾರಿ ಚಿಂತಿಸಿ ಕಾರ್ಯ ಪ್ರವೃತ್ತರಾಗಿ.ನೀವು ಹೊಸದಾದ ಕಾಯಕಲ್ಪವೊಂದನ್ನು ನಿಮ್ಮ ವಹಿವಾಟಿಗೆ ಒದಗಿಸಿಕೊಡಲು ಕಾಲ ಪಕ್ವವಾಗಿದೆ. ಇಂತಹ ಒಳ್ಳೆಯ ಅವಕಾಶವನ್ನು ತಪ್ಪಿಸಿಕೊಳ್ಳಬೇಡಿ. ಹಣಕಾಸಿನ ಸ್ಥಿತಿ ಉತ್ತಮವಾಗಿರುತ್ತದೆ.
ಅದೃಷ್ಟ ಸಂಖ್ಯೆ:2

 

 

ಮೀನ

ನೀವು ಉತ್ತಮ ಕವಿಯಾಗಿದ್ದರೆ ಅಥವಾ ಉತ್ತಮ ನಳಪಾಕ ತಜ್ಞರಾಗಿದ್ದರೆ ನಿಮ್ಮ ವೃತ್ತಿಗೆ ಗೌರವ ತರುವಂತಹ ಕೆಲಸ ನಿಮ್ಮಿಂದಾಗುವುದು. ಎಲ್ಲರ ಬಾಯಲ್ಲಿಯೂ ನಿಮ್ಮ ಗುಣಗಾನ ನಡೆಯುವುದು. ಸಂಶೋಧಕರಿಗೆ, ತಾಂತ್ರಿಕ ಪರಿಣಿತರಿಗೆ ಉತ್ತಮ ದಿನ. ನಿಮ್ಮ ಸಂಶೋಧನಾ ಬರಹಗಳಿಗೆ ಮಾನ್ಯತೆ ದೊರೆತು ವೃತ್ತಪತ್ರಿಕೆಯಲ್ಲಿ ಆ ಲೇಖನವು ಪ್ರಕಟಗೊಳ್ಳುವ ಸಾಧ್ಯತೆ ಇರುತ್ತದೆ. ಗುರುವಿನ ಸ್ತೋತ್ರ ಪಠಿಸಿ.ಮನೆಯ ನಾಲ್ಕು ಗೋಡೆಗಳ ಮಧ್ಯೆಯೇ ಕಾಲ ತಳ್ಳುವಂತಹ ಪರಿಸ್ಥಿತಿ ಎದುರಾಗುವುದು. ಹೊತ್ತು ಕಳೆಯುವುದು ಕಷ್ಟವಾಗುವುದು. ಪುರಾಣ ಪುರುಷರ ಅಥವಾ ಧಾರ್ಮಿಕ ಪುಸ್ತಕಗಳನ್ನು ಓದುವತ್ತ ಗಮನ ಕೊಡಿ. ಮನಸ್ಸು ಪ್ರಶಾಂತವಾಗುವುದು.
ಅದೃಷ್ಟ ಸಂಖ್ಯೆ:1

 

ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂ ನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತು ನೀವು ಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮ ಅನುಮಾನ ಹಾಗೂ ಆತಂಕಗಳನ್ನು ಅಳಿಸಬಹುದು ಮತ್ತು ಪ್ರಶ್ನೆಗಳಿಗೆ ಉತ್ತರಿಸಬಹುದು. ಮದುವೆ, ಸಂತಾನ ಕೊರತೆ ,ಶತ್ರುಕಾಟ, ಕುಜದೋಷ ಪರಿಣಾಮ, ಮಕ್ಕಳು ತೊಂದರೆ, ಸ್ತ್ರೀಪುರುಷ ಪ್ರೇಮ ವಿಚಾರ, ವಿದೇಶಿ ಯೋಗ, ಅನಾರೋಗ್ಯ, ಮನೆಕಟ್ಟುವ ಯೋಗ, ರಾಜಕೀಯದ ಭವಿಷ್ಯ, ಸ್ಥಾನಮಾನ ತೊಂದರೆ, ಕುಟುಂಬದಲ್ಲಿದ್ದ ಸಮಸ್ಯೆ, ಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ ಬಲಿಷ್ಟ ಪೂಜಾ ಶಕ್ತಿಯಿಂದ ಸರ್ವ ಗುಪ್ತ ಸಮಸ್ಯೆಗಳಿಗೆ ಶಾಶ್ವತ ಪರಿಹಾರ 9845743807 call/ whatsapp

ನಿಮ್ಮ ಕೈಗಳಿಗೆ ಮೆಹಂದಿ ಹಾಕಿಕೊಳ್ಳಲು ಬೆಸ್ಟ್ ಡಿಸೈನ್ಸ್ ಇಲ್ಲಿದೆ ನೋಡಿ.

#dinabhavishya #daily-horoscope-kannada #astrology #bhavishya

Tags