ಆರೋಗ್ಯಜೀವನ ಶೈಲಿ

ಹುಳುಕಡ್ಡಿ, ಮೈಕೈನೋವಿಗೆ ತುಳಸಿ ಪವರ್ ಫುಲ್ ಮೆಡಿಸಿನ್

ತುಳಸಿ ಅನೇಕ ಕಾಯಿಲೆಗಳಿಗೆ ರಾಮಬಾಣ ಎಂಬುದರಲ್ಲಿ ಎರಡು ಮಾತಿಲ್ಲ. ಅನಾದಿ ಕಾಲದಿಂದಲೂ ಇದನ್ನು ಮನೆಮದ್ದಾಗಿ ಬಳಸಿಕೊಳ್ಳಲಾಗುತ್ತಿದೆ. ಇಲ್ಲಿ ವಿಶೇಷವಾಗಿ ಹುಳುಕಡ್ಡಿ, ಮೈಕೈನೋವಿಗೆ ತುಳಸಿ ಹೇಗೆ ಪರಿಹಾರ ಒದಗಿಸುತ್ತದೆ ಎಂಬುದರ ಬಗ್ಗೆ ಕೊಡಲಾಗಿದೆ.

Image result for ringworm

 

ಹುಳುಕಡ್ಡಿಗೆ ಹೀಗೆ ಮಾಡಿ…

ತುಳಸಿ ಗಿಡದ ಕಾಂಡದಿಂದ ಹುಳುಕಡ್ಡಿಯ ಭಾಗವನ್ನು ಚೆನ್ನಾಗಿ ಕೆರೆದು, ಅನಂತರ ತುಳಸಿ ಸೊಪ್ಪಿನ ಕಷಾಯದಿಂದ ಆ ಭಾಗವನ್ನು ಚೆನ್ನಾಗಿ ತೊಳೆಯಬೇಕು. ಇದಾದ ಮೇಲೆ ತುಳಸಿ ಸೊಪ್ಪನ್ನು ಚೆನ್ನಾಗಿ ಅರೆದು ಹುಳುಕಡ್ಡಿಯ ಮೇಲೆ ಲೇಪಿಸುವುದರಿಂದ ಶೀಘ್ರ ಗುಣ ಕಂಡುಬರುವುದು.

ಮೈಕೈನೋವು ಶಮನ…

ಒಂದು ಲೋಟ ನೀರಿನಲ್ಲಿ ಹತ್ತು ತುಳಸಿ ಎಲೆಗಳನ್ನು ಚೆನ್ನಾಗಿ ಕುದಿಸುವುದು. ನೀರು ಚೆನ್ನಾಗಿ ಕುದಿದು ಅರ್ಧ ಲೋಟ ಆದಮೇಲೆ ಸೋಸಿಕೊಳ್ಳುವುದು. ತಣ್ಣಗಾದ ಕಷಾಯಕ್ಕೆ ಉಪ್ಪನ್ನು ಹಾಕಿ ಕುಡಿಯುವುದು. ಮೈಕೈನೋವು ನಿಲ್ಲುವವರೆಗೂ ಪ್ರತಿದಿನ ಈ ಕಷಾಯ ಬಳಸುವುದು. ಜತೆಗೆ, ಅರ್ಧ ಗ್ರಾಂ ದಾಲ್ಚಿನ್ನಿ (ಚಕ್ಕೆ) ಪುಡಿಯನ್ನು ಒಂದು ಟೀ ಚಮಚ ಜೇನುತುಪ್ಪದೊಂದಿಗೆ ಕನಿಷ್ಟ ಪಕ್ಷ ದಿನಕ್ಕೆರಡು ಬಾರಿ ಸೇವಿಸಿದರೆ ನೋವು ಬೇಗ ಶಮನವಾಗುವುದು.

#balkaninews #basil #health #ringworm #body pain

Tags