ಆರೋಗ್ಯಆಹಾರಜೀವನ ಶೈಲಿ

ತುಳಸಿ ಎಲೆಯ ಕೆಲವು ಆರೋಗ್ಯಕರ ಉಪಯೋಗಗಳು

ಆಯುರ್ವೇದದಲ್ಲಿ ತುಳಸಿ ಗಿಡವನ್ನು ಔಷಧಿಯಾಗಿ ಪರಿಗಣಿಸಲಾಗಿದ್ದು, ಪ್ರತಿಯೊಂದು ಪೂಜೆ ಪುನಸ್ಕಾರಗಳಲ್ಲಿ ಶುದ್ಧತೆಯ ಸಂಕೇತವಾಗಿ ಇದನ್ನು ಹೆಚ್ಚಾಗಿಯೇ ಬಳಸುತ್ತಾರೆ.

ಅಂದ ಹಾಗೆ ತುಳಸಿ ಎಲ್ಲರ ಮನೆಯಲ್ಲೂ ಬೆಳೆಯುವ ದೈವಿಕ ಸಸ್ಯವಾಗಿದ್ದು, ಇದರಲ್ಲಿ ಹಲವಾರು ಔಷಧೀಯ ಗುಣಗಳಿವೆ. ಇದರ ಎಲೆಯ ಗಂಧವೇ ವಾತಾವರಣವನ್ನು ತಂಪು ಮತ್ತು ಕಲ್ಮಶರಹಿತವಾಗಿಸುವ ಶಕ್ತಿ ಹೊಂದಿದೆ.

1 ಜ್ವರ ಹಾಗೂ ಶೀತಕ್ಕೆ ಇದರ ಎಲೆಗಳನ್ನು ಚಹಾದೊಂದಿಗೆ ಕುದಿಸಿ ಕುಡಿಯುವುದರಿಂದ ಮಲೇರಿಯಾ ಹಾಗೂ ಡೆಂಗ್ಯೂ ಜ್ವರ ಉಪಶಮನವಾಗುತ್ತದೆ.

2 ತುಳಸಿ ರಸವನ್ನು ಜೇನಿನೊಂದಿಗೆ ನಿಯಮಿತವಾಗಿ 6 ತಿಂಗಳು ತೆಗೆದುಕೊಂಡಲ್ಲಿ ನೋವಿನ ಬಾಧೆ ಕಡಿಮೆಯಾಗುತ್ತದೆ.

3 ತುಳಸಿ ಎಲೆಗಳನ್ನು ನೀರಿನಲ್ಲಿ ಹಾಕಿಟ್ಟರೆ ನೀರಿನಲ್ಲಿರುವ ಸೂಕ್ಷ್ಮ ರೋಗಾಣುಗಳು ನಾಶವಾಗುತ್ತವೆ.

4 ಪ್ರತಿದಿನ ತುಳಸಿ ಎಲೆಗಳನ್ನು ಬೆಳಗ್ಗೆ ಖಾಲಿ ಹೊಟ್ಟೆಯಲ್ಲಿ ಅಗಿದು ತಿನ್ನುವುದರಿಂದ ದೇಹದಲ್ಲಿ ರೋಗ ನಿರೋಧಕ ಶಕ್ತಿ ಹೆಚ್ಚುತ್ತದೆ.

5 ಕೆಮ್ಮು, ನೆಗಡಿ ಇರುವಾಗ ಎರಡು ಚಮಚ ತುಳಸಿ ಎಲೆಯ ರಸವನ್ನು ಜೇನು ತುಪ್ಪದೊಂದಿಗೆ ಬೆರೆಸಿ ಸೇವಿಸಿದರೆ ವಾಸಿಯಾಗುತ್ತದೆ.

6 ಚರ್ಮ ರೋಗಗಳಿಗೆ ಇದರ ತುಳಸಿ ರಸ ಹಚ್ಚಿದರೆ ಬೇಗ ಗುಣಮುಖವಾಗುತ್ತದೆ.

ಈರುಳ್ಳಿ ತಿನ್ನುವುದರಿಂದ ಆಗುವ ಆರೋಗ್ಯಕರ ಲಾಭಗಳಿವು

#BasilPlant #HealthTips #LifeStyle

Tags