ಸುದ್ದಿಗಳು

‘ಚಂಬಲ್’ ಬಿಡುಗಡೆಗೆ ತಡೆ ಕೋರಿ ಹೈಕೋರ್ಟ್ ಗೆ ಅರ್ಜಿ…!!!

ಚಿತ್ರವನ್ನು ಬಿಡುಗಡೆ ಮಾಡದಂತೆ ಅರ್ಜಿದಾರರಿಂದ ಅರ್ಜಿ

ಬೆಂಗಳೂರು.ಫೆ.20

ನಟ ನೀನಾಸಂ ಸತೀಶ್ ಹಾಗೂ ಸೋನು ಗೌಡ ನಟಿಸಿರುವ ‘ಚಂಬಲ್’ ಸಿನಿಮಾ ಇದೇ ಶುಕ್ರವಾರ ರಾಜ್ಯಾದ್ಯಂತ ಬಿಡುಗಡೆಯಾಗುತ್ತಿದೆ. ಆದರೆ ಚಿತ್ರದ ಬಿಡುಗಡೆಗೆ ತಡೆ ಕೋರಿ ಐಎಎಸ್ ಅಧಿಕಾರಿ ದಿವಂಗತ ಡಿಕೆ. ರವಿ ಅವರ ತಾಯಿ ಗೌರಮ್ಮ ಹಾಗೂ ತಂದೆ ಕರಿಯಪ್ಪ ಹೈಕೋರ್ಟ್ ಗೆ ರಿಟ್ ಅರ್ಜಿ ಸಲ್ಲಿಸಿದ್ದಾರೆ.

ಹೈಕೋರ್ಟ್ ಗೆ ಅರ್ಜಿ

ಚಿತ್ರದಲ್ಲಿ ದಕ್ಷ ಅಧಿಕಾರಿ ಡಿ.ಕೆ ರವಿ ಅವರ ಚಾರಿತ್ರ್ಯ ಹರಣ ಮಾಡುವಂತಹ ಅಂಶಗಳನ್ನು ಸೇರಿಸಲಾಗಿದೆ. ಚಿತ್ರದ ಟ್ರೇಲರ್ ಹಾಗೂ ಶೀರ್ಷಿಕ ಅವಹೇಳನಕಾರಿಯಾಗಿದೆ. ಆದ್ದರಿಂದ ಚಿತ್ರದ ಸೆನ್ಸಾರ್ ಪ್ರಮಾಣಪತ್ರ ಹಿಂಪಡೆಯುವಂತೆ ನಿರ್ದೇಶನ ನೀಡಬೇಕು ಎಂದು ಅರ್ಜಿದಾರರು ಮನವಿ ಮಾಡಿದ್ದಾರೆ. ಸದ್ಯ ಹೈಕೋರ್ಟ್ ವಿಚಾರಣೆಯನ್ನು ಮಾರ್ಚ್ 21ಕ್ಕೆ ಮುಂದೂಡಿದೆ.

ಚಿತ್ರದ ಬಗ್ಗೆ

ಈಗಾಗಲೇ ಈ ಚಿತ್ರದ ಟ್ರೈಲರ್ ಕಳೆದ ತಿಂಗಳ 31ರಂದು ಯೂಟ್ಯೂಬ್ ನಲ್ಲಿ ಬಿಡುಗಡೆಯಾಗಿ ಉತ್ತಮ ಪ್ರತಿಕ್ರಿಯೆ ಪಡೆದಿತ್ತು. ಚಿತ್ರದಲ್ಲಿ ಸತೀಶ್ ಒಬ್ಬ ದಕ್ಷ ಪೊಲೀಸ್ ಅಧಿಕಾರಿ ಪಾತ್ರದಲ್ಲಿ ಕಾಣಿಸಿಕೊಂಡಿದ್ದಾರೆ. ಆದರೆ ಇದು ಡಿ.ಕೆ ಅಧಿಕಾರಿಯವರ ಕಥೆ ಹೋಲುತ್ತಿದೆ ಎಂಬ ಮಾತುಗಳು ಕೇಳಿ ಬಂದಿದವು. ನಂತರ .ಕೆ ರವಿ ಅವರ ತಾಯಿ ಗೌರಮ್ಮ ಈ ಚಿತ್ರದ ಕುರಿತಂತೆ ಫಿಲ್ಮ್ ಚೇಂಬರ್ ಗೆ ದೂರು ನೀಡಿದ್ದರು.

“ಚಿತ್ರದ ಟ್ರೈಲರ್ನಲ್ಲಿ ನನ್ನ ಮಗನ ಕಥೆ, ಸಂಭಾಷಣೆ ಹಾಗೂ ಜೀವನಶೈಲಿಯನ್ನು ನಮ್ಮ ಅನುಮತಿ ಇಲ್ಲದೇ ಚಿತ್ರೀಕರಣ ಮಾಡಲಾಗಿದೆ. ಇದರಿಂದಾಗಿ ಚಿತ್ರ ಬಿಡುಗಡೆಗೂ ಮುನ್ನ ನಾವು ಚಿತ್ರವನ್ನು ವೀಕ್ಷಿಸಬೇಕು ಎಂದು ಕೋರಿ ಡಿ.ಕೆ.ರವಿ ತಾಯಿ ಗೌರಮ್ಮ ಫಿಲ್ಮ್ ಚೇಂಬರ್ ಗೂ ಕೂಡ ಪತ್ರ ಬರೆದಿದ್ದರು, ಈಗ ಹೈಕೋರ್ಟ್ನಲ್ಲಿ ರಿಟ್ ಅರ್ಜಿ ಸಲ್ಲಿಸಿದ್ದಾರೆ.

ಅರ್ಜಿ ವಿಚಾರಣೆ ನಡೆಸಿದ ನ್ಯಾ.ಸುನೀಲ್ ದತ್ ಯಾದವ್ ಅವರಿದ್ದ ಏಕಸದಸ್ಯ ಪೀಠ, ಕೇಂದ್ರ ಸಾರ್ವಜನಿಕ ಮತ್ತು ಮಾಹಿತಿ ಸಚಿವಾಲಯದ ಕಾರ್ಯದರ್ಶಿ, ರಾಜ್ಯ ಗೃಹ ಇಲಾಖೆ ಕಾರ್ಯದರ್ಶಿ, ರಾಜ್ಯ ಸೆನ್ಸಾರ್ ಮಂಡಳಿ, ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿ ಹಾಗೂ ಚಿತ್ರತಂಡಕ್ಕೆ ನೋಟಿಸ್ ಜಾರಿಮಾಡಿದೆ.

ಮತ್ತೆ ಹೊಸಬರೊಂದಿಗೆ ಪ್ರೇಮಕಥೆ ಶುರು ಮಾಡಿದ ಮಹೇಶ್ ಬಾಬು

#chambal, #balkaninews #filmnews, #kannadasuddigalu, #sathishninasam, #sonugowda,

Tags

Related Articles