ಸುದ್ದಿಗಳು

ಕನ್ನಡದಲ್ಲೇ ಮಾತನಾಡಿ ಕನ್ನಡಿಗರಿಗೆ ಧನ್ಯವಾದ ತಿಳಿಸಿದ ಭೀಮ!!

ಚಾಲೆಂಜಿಂಗ್ ಸ್ಟಾರ್ ಅಭಿನಯದ 50ನೇ ಸಿನಿಮಾ ಕುರುಕ್ಷೇತ್ರ ರಿಲೀಸ್ ಆಗಿ ಯಶಸ್ವಿ ಪ್ರದರ್ಶನ ಕಾಣುತ್ತಿದೆ. ವರಮಹಾಲಕ್ಷ್ಮಿ ಹಬ್ಬದ ದಿನ ಬಿಡುಗಡೆಯಾಗಿದ್ದು ಚಿತ್ರ ಭರ್ಜರಿ ಗಳಿಕೆಯನ್ನು ಪಡೆದಿದೆ.

ಈಗ ಈ ಚಿತ್ರದ ಪರಭಾಷಾ ನಟರೊಬ್ಬರಿಗೆ ಭರ್ಜರಿ ರೆಸ್ಪಾನ್ಸ್ ಸಿಕ್ಕಿದೆ. ಭೀಮನ ಪಾತ್ರದಲ್ಲಿ ಮಿಂಚಿರೋ ಡ್ಯಾನಿಶ್ ಅಖ್ತರ್ ಸೈಫ್ ಕನ್ನಡದ ಜನತೆಗೆ ಈಗ ಕ್ನನಡದಲ್ಲಿಯೇ ಮಾತಾಡಿ ಧನ್ಯವಾದ ತಿಳಿಸಿದ್ದಾರೆ.

ದರ್ಶನ್, ಅರ್ಜುನ್ ಸರ್ಜಾ, ನಿಖಿಲ್, ರವಿಚಂದ್ರನ್, ಸೋನು ಸೂದ್, ಅಂಬರೀಷ್, ಸ್ನೇಹಾ ಮತ್ತು ಮೇಘನಾ ರಾಜ್ ತಾರಾಗಣದಲ್ಲಿದ್ದಾರೆ. ದುರ್ಯೋಧನನ ಪಾತ್ರದಲ್ಲಿ ದರ್ಶನ್ ಅಬ್ಬರಿಸಿದ್ದಾರೆ. ಭೀಷ್ಮನಾಗಿ ಅಂಬರೀಷ್, ಕರ್ಣನಾಗಿ ಅರ್ಜುನ್ ಸರ್ಜಾ, ಅಭಿಮನ್ಯು ಆಗಿ ನಿಖಿಲ್ ಕಾಣಿಸಲಿದ್ದಾರೆ. ಶಕುನಿ ಪಾತ್ರದಲ್ಲಿ ರವಿಶಂಕರ್, ದ್ರೌಪದಿಯಾಗಿ ಸ್ನೇಹಾ, ಅರ್ಜುನನಾಗಿ ಸೋನು ಸೂದ್, ಕೃಷ್ಣನಾಗಿ ರವಿಚಂದ್ರನ್ ಹಾಗೂ ಶಲ್ಯನ ಪಾತ್ರದಲ್ಲಿ ರಾಕ್‌ಲೈನ್ ವೆಂಕಟೇಶ್ ತೆರೆಯ ಮೇಲೆ ಅಬ್ಬರಿಸಲಿದ್ದಾರೆ.

‘ಪ್ಯಾರಿಸ್ ಪ್ಯಾರಿಸ್’ಗೆ ಸೆನ್ಸಾರ್ ಸಮಸ್ಯೆ: ಕಾಜೋಲ್ ಕೊಟ್ಟ ಉತ್ತರ ಹೀಗಿತ್ತು…

#danishaktharsafi #kurukshetramoviekannada #darshan 

Tags