ಸುದ್ದಿಗಳು

ಮುಗ್ದ ಮನಸ್ಸಿನ ಮಕ್ಕಳ ನಟನಾ ಕೌಶಲ್ಯಕ್ಕೆ ವೇದಿಕೆಯಾಗಿರುವ “ಡ್ಯಾಮಾ ಜ್ಯೂನಿಯರ್ಸ್ ಸೀಸನ್ 3”

ಜೀ ಕನ್ನಡ ವಾಹಿನಿಯಲ್ಲಿ ಪ್ರಸಾರವಾಗುತ್ತಿರುವ ರಿಯಾಲಿಟಿ ಶೋ

ಬೆಂಗಳೂರು, ಅ.23: ರಿಯಾಲಿಟಿ ಶೋ ಗಳಲ್ಲಿ ನಿರೀಕ್ಷೆಗೂ ಮೀರಿ ತನ್ನದೇ ಸಂಚಲನ ಮೂಡಿಸಿದ ವಾಹಿನಿ ಜೀ ಕನ್ನಡ. ಪ್ರೇಕ್ಷಕರ ಬೇಕು ಬೇಡಗಳನ್ನು ಅರ್ಥೈಸಿಕೊಂಡು ಇಲ್ಲಿಯವರೆಗೂ ಹತ್ತು ಹಲವು ಸದಭಿರುಚಿಯ ವಿಭಿನ್ನ ಪ್ರಯೋಗಗಳನ್ನು ಮಾಡುತ್ತ ಹೊಸ ದಾಖಲೆಗಳಿಗೆ ನಾಂದಿ ಹಾಡುತ್ತಿದೆ.

ರಿಯಾಲಿಟಿ ಶೋ ಚಿತ್ರಿಕರಣ ಮತ್ತು ಪ್ರಸಾರ ಎರಡೂ ಜನರಿಂದ ದೂರವಾಗಿ ನಡೆಯುವಂತ ಪ್ರಕ್ರಿಯೆ. ಇಲ್ಲಿ ಪ್ರೇಕ್ಷಕರಿಗು, ನಟರಿಗು ನೇರ ಮುಖಾಮುಖಿ ಇರುವುದಿಲ್ಲ.ಆದರೆ ರಂಗಭೂಮಿ ಜನರ ನೇರಸಂಪರ್ಕಕ್ಕೆ ಮತ್ತು ಸಂವಹನಕ್ಕೆ ಒಳಪಡುವಂತದ್ದು.ಪ್ರೇಕ್ಷಕರಿಂದ ಉತ್ತಮ ಪ್ರತಿಕ್ರಿಯೆ ಪಡೆದ ರಿಯಾಲಿಟಿ ಶೋ

“ಡ್ರಾಮಾ ಜ್ಯೂನಿಯರ್ಸ್ ರಿಯಾಲಿಟಿ ಶೋ” ಮುಗ್ದ ಮನಸ್ಸಿನ ಮಕ್ಕಳ ನಟನಾ ಕೌಶಲ್ಯಕ್ಕೆ ಮತ್ತು ಅವರ ಅಭಿನಯ ಸಾಮರ್ಥ್ಯಕ್ಕೆ ವೇದಿಕೆಯನ್ನು ಒದಗಿಸುವ ಒಂದು ಉತ್ತಮ ಶೋ. ಈ ಶೋ ಕೇವಲ ಮನರಂಜನೆಯನ್ನಷ್ಟೇ ನೀಡದೇ, ವಿನೂತನ, ವಿಭಿನ್ನ ಪ್ರಯೋಗಗಳನ್ನು ಮಾಡಿ ಹೊಸ ದಾಖಲೆಗಳಿಗೆ ನಾಂದಿ ಹಾಡಿದೆ. ಅಭಿನಯದ ಜೊತೆಗೆ ರಂಗಭೂಮಿಯ ವಿವಿಧ ಮಜಲುಗಳನ್ನು ಪರಿಚಯಿಸುವುದರ  ಜೊತೆಗೆ ಸಾಮಾಜಿಕ ಸಂದೇಶಗಳನ್ನು ನೀಡುತ್ತ ಪ್ರೇಕ್ಷಕ ಮಹಾಶಯರಿಂದ ಇದೊಂದು ಅದ್ಭುತವಾದ ಕಾರ್ಯಕ್ರಮ ಎಂಬ ಹೆಗ್ಗಳಿಕೆಗೆ ಪಾತ್ರವಾಗಿದೆ.

ಕನ್ನಡ ಚಿತ್ರರಂಗಕ್ಕೆ ಹತ್ತು ಹಲವೂ ಬಾಲ ಕಲಾವಿದರನ್ನು ಕೊಡುಗೆಯಾಗಿ ನೀಡುವ ನಿಟ್ಟಿನಲ್ಲಿ ಆರಂಭವಾದ “ಡ್ರಾಮಾ ಜ್ಯೂನಿಯರ್ಸ್ ಸೀಸನ್ 1 ಮತ್ತು ಸೀಸನ್ 2” ಎಂಬ ಅತ್ಯದ್ಭುತ ಯಶಸ್ಸಿನ ಕಾರ್ಯಕ್ರಮವನ್ನು ಪರಿಚಯಿಸಿದಲ್ಲದೇ, ಅದು ಕರ್ನಾಟಕವಲ್ಲದೇ ದೇಶ ವಿದೇಶದ ಕನ್ನಡಿಗರಲ್ಲೆರು ಅದರ ಒಂದು ಭಾಗವಾಗುವಂತೆ ಮಾಡಿದ ಕೀರ್ತಿ ಜೀ ವಾಹಿನಿಗೆ ಸಲ್ಲುತ್ತದೆ. ಅದರ ಮುಂದುವರಿದ ಅಧ್ಯಾಯವೆಂಬಂತೆ “ಡ್ರಾಮಾ ಜ್ಯೂನಿಯರ್ಸ್ ಸೀಸನ್ 3” ಆರಂಭಗೊಂಡಿದ್ದು, ಮತ್ತೊಂದು ವಿಭಿನ್ನ ಪ್ರಯತ್ನಕ್ಕೆ ಸಾಕ್ಷಿಯಾಗುತ್ತಿದೆ.

ಮೆಗಾ ಆಡಿಷನ್

ಕರ್ನಾಟಕದಾದ್ಯಂತ 30 ಜಿಲ್ಲೆಗಳಲ್ಲಿ ಆಡಿಷನ್ ಪ್ರಕ್ರಿಯೆ ನಡೆದಿದ್ದು, ಅದರಲ್ಲಿ ಅಭಿನಯ ಕೌಶಲ್ಯದ ಹಿನ್ನಲೆಯುಳ್ಳ 30 ಮಕ್ಕಳನ್ನು ಆಯ್ಕೆ ಮಾಡಿಕೊಂಡಿದ್ದು, ಆ 30 ಮಕ್ಕಳು ಮೆಗಾ ಆಡಿಷನ್ ನಲ್ಲಿ ಭಾಗಿಯಾಗಿದ್ದಾರೆ.

ಹೊಸ ಹೊಸ ಪ್ರಯೋಗಗಳು, ಹೊಸ ಪ್ರಯತ್ನದೊಂದಿಗೆ ಹಿಂದೆಂದು ನೋಡಿರದಂತ, ಹಿಂದೆಂದು ಕೇಳಿರದಂತ ಮನರಂಜನೆ ಈ ಒಂದು ಕಾರ್ಯಕ್ರಮದಲ್ಲಿ ನಿಮಗಾಗಿ ಎದುರುಗೊಳ್ಳುತ್ತಿದೆ.

ತ್ರಿವಳಿ ಜೆಡ್ಜಸ್

ಇನ್ನುಳಿದಂತೆ ಕಾರ್ಯಕ್ರಮಕ್ಕೆ ಅಂದದ ಮೆರುಗೆಂಬಂತೆ ತ್ರಿವಳಿ ಜೆಡ್ಜಸ್ ಗಳಾದ “ಜೂಲಿ ಲಕ್ಷ್ಮಿ, ಮುಖ್ಯಮಂತ್ರಿ ಚಂದ್ರು ಹಾಗು ವಿಜಯರಾಘವೇಂದ್ರ” ರವರು ಕಾರ್ಯಕ್ರಮದ ನಿರ್ಣಾಯಕರಾದರೆ ಮಕ್ಕಳಿಂದ ಹಿಡಿದು ವಯೋಮಾನದವರಿಗೆಲ್ಲರಿಗು ಪ್ರೀತಿ ಪಾತ್ರರಾದ “ಮಾಸ್ಟರ್ ಆನಂದ್” ತಮ್ಮ ಮಾತಿನ ಚಟಾಕಿಯ ಮೂಲಕ ನಿರೂಪಣೆಯನ್ನು ನೀಡಲಿದ್ದಾರೆ.

ಅಂದುಕೊಂಡಿರುವಂತೆ ಎಲ್ಲವೂ ಅತ್ಯದ್ಭುತವಾಗಿ ಸಜ್ಜುಗೊಳ್ಳುತ್ತಿದ್ದು, ಪ್ರೇಕ್ಷಕರಿಗೆ ವಿವಿಧ ಆಯಾಮಗಳಲ್ಲಿ ಮನರಂಜನೆ ನೀಡಲು ಸಜ್ಜಾಗಿ ಬರ್ತಾ ಇದೆ “ಡ್ರಾಮಾ ಜ್ಯೂನಿಯರ್ಸ್ ಸೀಸನ್ 3 ಪುಟಾಣಿಗಳು”.

 

Tags

Related Articles