ಸುದ್ದಿಗಳು

ಗೋಲ್ಡನ್ ಸ್ಟಾರ್ ಗಣೇಶ್ ತಂದೆ ವಿಧಿವಶ

ಅನಾರೋಗ್ಯದಿಂದ ಬಳಲುತ್ತಿದ್ದ ನಟ ಗೋಲ್ಡನ್ ಸ್ಟಾರ್ ಗಣೇಶ್ ರವರ ತಂದೆ ರಾಮಕೃಷ್ಣಪ್ಪ ನವರು ಸೋಮವಾರ ಸಂಜೆ ಮೃತಪಟ್ಟಿದ್ದಾರೆ. ಇವರಿಗೆ 82 ವರ್ಷ ವಯಸ್ಸಾಗಿತ್ತು.

ನೆಲಮಂಗಲ ಸಮೀಪದ ಅಡಕಿ ಮಾರನಹಳ್ಳಿಯಲ್ಲಿ ವಾಸವಿದ್ದ  ರಾಮಕೃಷ್ಣಪ್ಪ  ಅವರು ಕೆಲ ದಿನಗಳಿಂದ ಅನಾರೋಗ್ಯದಿಂದ ಬಳಲುತ್ತಿದರು. ಅನಾರೋಗ್ಯದ ಹಿನ್ನೆಲೆಯಲ್ಲಿ ಅವರನ್ನು ಬಿಜಿಎಸ್ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತಿತ್ತು.

ಚಿಕಿತ್ಸೆ ಫಲಕಾರಿಯಾಗದೆ ಸೋಮವಾರ ಸಂಜೆ ಆಸ್ಪತ್ರೆಯಲ್ಲಿ  ನಿಧನರಾಗಿದ್ದಾರೆ. ಅಡಕಿಮಾರನಹಳ್ಳಿಯಲ್ಲಿ ಇಂದು ಬೆಳಿಗ್ಗೆ ಹನ್ನೊಂದಕ್ಕೆ ಮೃತರ ಅಂತ್ಯ ಸಂಸ್ಕಾರ ನೆರವೇರಲಿದೆ.

Tags