ಸುದ್ದಿಗಳು

ಗಿರೀಶ್ ಕಾರ್ನಾಡ್ ನಿಧನ ಹಿನ್ನೆಲೆ: ಸರ್ಕಾರಿ ಕಾಲೇಜುಗಳಿಗೆ ರಜೆ ಘೋಷಣೆ

ಜ್ಞಾನಪೀಠ ಪ್ರಶಸ್ತಿ ಪುರಸ್ಕೃತ  ಗಿರೀಶ್ ಕಾರ್ನಾಡ್ ನಿಧನರಾದ  ಹಿನ್ನೆಲೆಲ್ಲಿ ಗೌರವಾರ್ಥ ಇಂದು ಒಂದು ದಿನ  ಸರ್ಕಾರಿ ಕಚೇರಿಗಳು, ಶಾಲೆ, ಕಾಲೇಜುಗಳಿಗೆ ರಾಜ್ಯ ಸರ್ಕಾರ ರಜೆ ಘೋಷಿಸಿದೆ.

ಹಾಗೆಯೇ ಮೂರು ದಿನಗಳ ಕಾಲ ರಾಜ್ಯಾದ್ಯಂತ ಶೋಕಾಚರಣೆ ಘೋಷಿಸಿದ್ದು,ಸಕಲ ಸರ್ಕಾರಿ ಗೌರವಗಳೊಂದಿಗೆ ಮೃತರ ಅಂತ್ಯಕ್ರಿಯೆ ನೆರವೇರಿಸಲಾಗುವುದು ಎಂದು  ಸಿಎಂ ಹೆಚ್.ಡಿ ಕುಮಾರಸ್ವಾಮಿ ಸ್ಪಷ್ಟಪಡಿಸಿದ್ದಾರೆ.

ಈ ಹಿಂದೆ ನಿಧನರಾದ ಇತರ ಜ್ಞಾನಪೀಠ ಪ್ರಶಸ್ತಿ ಪುರಸ್ಕೃತ ಸಾಹಿತಿಗಳ ಗೌರವಾರ್ಥ ಸರ್ಕಾರ ಕೈಗೊಂಡಿರುವ ಕ್ರಮಗಳನ್ನು ಕಾರ್ನಾಡ್ ಅವರ ಗೌರವಾರ್ಥವಾಗಿ ಕೈಗೊಳ್ಳಲಿದೆ ಎಂದು ಅವರು ಸ್ಪಷ್ಟಪಡಿಸಿದ್ದಾರೆ.

ಗಿರೀಶ್ ಕಾರ್ನಾಡ್ ನಿಧನದ ಹಿನ್ನೆಲೆ ಅವರು ವಿದ್ಯಾಬ್ಯಾಸ ಮಾಡಿದ ಶಾಲೆಯಲ್ಲಿ ಮೌನಾಚರಣೆ

 

#balkaninews #karnatakachiefminister #hdkumaraswamy #holiday #girishkarnadfacbook #girishkarnadtwitter

Tags