ಸುದ್ದಿಗಳು

ಔರಂಗಜೇಬನ ಸೈನ್ಯವನ್ನು ಸೋಲಿಸಿದ ಕರುನಾಡ ಕೆಳದಿಯರಸಿ

ಬೆಂಗಳೂರು, ಆ. 10: ಸ್ವಾತಂತ್ರ್ಯ ಹೊರಾಟವನ್ನು ನಡೆಸಿದವರಲ್ಲಿ ‘ಕೆಳದಿ ಚೆನ್ನಮ್ಮ’ ಸಹ ಪ್ರಮುಖ ಪಾತ್ರವನ್ನು ವಹಿಸುತ್ತಾರೆ. ಇವರು ಕಿತ್ತೂರಿನ ದೇಸಾಯಿಗಳಲ್ಲಿ ಪ್ರಸಿದ್ಧನಾದ ಮಲ್ಲಸರ್ಜನ ಕಿರಿಯ ಹೆಂಡತಿಯಾಗಿದ್ದು, ತನ್ನ ಪುಟ್ಟ ರಾಜ್ಯದ ಸ್ವಾತಂತ್ರ ರಕ್ಷಣೆಗಾಗಿ ಬ್ರಿಟಿಷರ ದೊಡ್ಡ ಸೈನ್ಯದ ವಿರುದ್ಧ ಸೆಟೆದು ನಿಂತು ನಡೆಸಿದ ಹೋರಾಟ, ಅಲ್ಲಿ ತೋರಿಸಿದ ಧೈರ್ಯ, ಸಾಹಸಗಳು ಇವರನ್ನು ಅಜರಾಮರವಾದ ಕೀರ್ತಿ ಶಿಖರಕ್ಕೇರಿಸಿವೆ.

1690 ರಲ್ಲಿಕೆಳದಿ ಮತ್ತು ಮೊಗಲ್ ಸೈನ್ಯಗಳ ನಡುವೆ ಯುದ್ಧ ನಡೆಯಿತು. ಕದನದಲ್ಲಿ ಮೊಗಲ್ ಸೇನೆ ಪರಾಭವಗೊಂಡು ಪಲಾಯನ ಮಾಡಿತು. ಮೊಗಲರ ಸೋಲಿನಿಂದ ರಾಣಿ ಚೆನ್ನಮ್ಮಾಜಿಯ ಕೀರ್ತಿ ಇಡೀ ಭಾರತದಲ್ಲಿ ಹಬ್ಬಿತು. ಈ ಸಂಗತಿಯನ್ನು ಕುರಿತ ಜನಪದ ಗೀತೆಗಳು ಇಂದಿಗೂ ಕನ್ನಡನಾಡಿನಲ್ಲಿ ಪ್ರಚಾರದಲ್ಲಿವೆ.

ಚನ್ನಮ್ಮ ಮೊಗಲರ ಈ ಪ್ರಚಂಡ ಸೈನ್ಯವನ್ನು ಸೋಲಿಸಿ ಅವರು ರಣರಂಗದಿಂದ ಕಾಲ್ತೆಗೆಯುವಂತೆ ಮಾಡಿದಳು. ಕಣಿವೆಗಳಲ್ಲಿ ವೈರಿಸೈನ್ಯವನ್ನು ಸಿಲುಕಿಸಿ ಔರಂಗಜೇಬನು ಒಪ್ಪಂದಕ್ಕೆ ಬರುವಂತೆ ಮಾಡಿದಳು. ದಕ್ಷ ಆಡಳಿತಗಾರಳಾದ ಇವರು ಜಾತಿ ಮತ ವಿಚಾರಗಳಲ್ಲಿ ಉದಾರ ನೀತಿ ಹೊಂದಿದ್ದರು. ಜಂಗಮರಿಗೆ ಮಠಗಳನ್ನು ಕಟ್ಟಿಸಿಕೊಟ್ಟರು. ತನ್ನ ಪತಿಯ ಹೆಸರಿನಲ್ಲಿ ಅನೇಕ ಅಗ್ರಹಾರಗಳನ್ನು ನಿರ್ಮಿಸಿದರು.

Tags

Related Articles