ಸುದ್ದಿಗಳು

ರಾಮೋಜಿರಾವ್ ಫಿಲ್ಮ್ ಸಿಟಿಯಲ್ಲಿ ಕನ್ನಡದ ಚಿತ್ರಗಳು…!!!

ಸದ್ಯ ‘ಭರಾಟೆ’, ‘ಪೊಗರು’ ಹಾಗೂ ‘ಪೈಲ್ವಾನ್’ ಚಿತ್ರಗಳ ಶೂಟಿಂಗ್ ನಡೆಯುತ್ತಿವೆ

ಬೆಂಗಳೂರು.ಫೆ.12

ಮುಂಚೆ.. ಅಂದರೆ ಒಂದು ಕಾಲದಲ್ಲಿ ಕನ್ನಡದ ಚಿತ್ರಗಳ ಚಿತ್ರೀಕರಣಗಳು ಚೆನೈನಲ್ಲಿ ನಡೆಯುತ್ತಿದ್ದವು. ನಂತರ ಕರ್ನಾಟಕದಲ್ಲೂ ಮುಂದುವರೆದವು. ಆದರೆ, ಈಗ ರಾಮೋಜಿರಾವ್ ಫಿಲ್ಮ್ ಸಿಟಿಯಲ್ಲಿ ನಡೆಯುತ್ತಿವೆ.

ಚಿತ್ರಗಳ ಶೂಟಿಂಗ್

ಬೆಂಗಳೂರಿನಲ್ಲಿ ಸಿನಿಮಾ ಶೂಟಿಂಗ್ ಸ್ಟುಡಿಯೋ ಇಲ್ಲವೆಂದಲ್ಲಾ, ಇದೆ.. ಆದರೆ ಸರ್ಕಾರಿ ಸ್ವಾಮ್ಯದ ಕಂಠೀರವ ಸ್ಟುಡಿಯೋ ಸೇರಿ ಖಾಸಗಿ ವಲಯದ ಹಲವು ಸ್ಟುಡಿಯೋ ಇವೆ. ಇರುವ ಸ್ಟುಡಿಯೋಗಳಲ್ಲಿ ಕಿರುತೆರೆಯ ರಿಯಾಲಿಟಿ ಶೋಗಳಿಗೆ ಚಿತ್ರೀಕರಣ ನಡೆಯುತ್ತಿವೆ. ಕೆಲವು ಸ್ಟುಡಿಯೋಗಳು ಖಾಯಂ ಕಿರುತೆರೆ ಶೋಗಳಿಗೆ ಫಿಕ್ಸ್ ಆಗಿವೆ. ಕೆಲವು ಸಮಸ್ಯೆಯಿಂದಾಗಿಯೇ ಕನ್ನಡದ ಚಿತ್ರಗಳ ಶೂಟಿಂಗ್‍ ಅನ್ನು ರಾಮೋಜಿರಾವ್ ಫಿಲ್ಮ್ ಸಿಟಿಯಲ್ಲಿ ನಡೆಸಲಾಗುತ್ತಿದೆ.

ಚಿತ್ರೀಕರಣದ ಹಂತದಲ್ಲಿರುವ ಸಿನಿಮಾಗಳು

ತೆಲುಗಿನ ‘ಬಾಹುಬಲಿ’ ಸಿನಿಮಾದ ಚಿತ್ರೀಕರಣ ರಾಮೋಜಿರಾವ್ ಫಿಲ್ಮ್ ಸಿಟಿಯಲ್ಲಿ ನಡೆದಿತ್ತು. ಇನ್ನು ದರ್ಶನ್ ನಟನೆಯ ‘ಕುರುಕ್ಷೇತ್ರ’ ಚಿತ್ರಕ್ಕೂ ಇಲ್ಲಿಯೇ ಚಿತ್ರೀಕರಣ ನಡೆಸಲಾಗಿತ್ತು. ಸದ್ಯ ಸದ್ಯ ಕೃಷ್ಣ ನಿರ್ದೇಶನದ ‘ಪೈಲ್ವಾನ್’, ನಂದಕಿಶೋರ್ ನಿರ್ದೇಶನದ ‘ಪೊಗರು’, ಚೇತನ್ ಕುಮಾರ್ ನಿರ್ದೇಶನದ ‘ಭರಾಟೆ’ ಚಿತ್ರದ ಚಿತ್ರೀಕರಣ ನಡೆಯುತ್ತಿದೆ. ಹೀಗಾಗಿ ಕಿಚ್ಚ ಸುದೀಪ್, ಶ್ರೀಮುರಳಿ, ಧ್ರುವ ಸರ್ಜಾ ಎಲ್ಲರೂ ಒಂದೇ ಕಡೆ ಚಿತ್ರೀಕರಣದಲ್ಲಿ ನಿರತರಾಗಿದ್ದಾರೆ ಅಂತ ಹೇಳಬಹುದು.

“ರೈಲ್ವೆ ಸ್ಟೇಷನ್ ಸೀಕ್ವೇನ್ಸ್ ಚಿತ್ರೀಕರಣಕ್ಕಾಗಿ ನಾವು ಅಲ್ಲಿಗೆ ಹೊರಟಿದ್ದೇವೆ. ಅಂತಹ ವ್ಯವಸ್ಥೆ ಇಲ್ಲಿ ಎಲ್ಲಿಯೂ ಲಭ್ಯವಿಲ್ಲ. ರಿಯಲ್ ಆಗಿ ಯಾವುದಾದರೂ ರೈಲ್ವೆ ಸ್ಟೇಷನ್ನಲ್ಲೇ ಚಿತ್ರೀಕರಣ ಮಾಡೋಣ ಅಂದುಕೊಂಡರೆ, ರೈಲ್ವೆ ಇಲಾಖೆ ಅನುಮತಿ ಪಡೆಯುವುದಕ್ಕೂ ಹೆಣಗಾಡಬೇಕು. ಅಲ್ಲಿಯಾದರೆ, ಅದಕ್ಕೆಲ್ಲ ಪರದಾಡಬೇಕಿಲ್ಲ. ಬಾಡಿಗೆ ಕಟ್ಟಿದರೆ ಸಾಕು. ಸುಲಭವಾಗಿ ಚಿತ್ರೀಕರಣ ಮುಗಿಸಿಕೊಂಡು ಬರಬಹುದು’ ಎಂದು ಚಿತ್ರತಂಡದವರು ಹೇಳುತ್ತಾರೆ.

ಫ್ಯಾನ್ಸಿ ಕಿವಿಯೋಲೆಗೆ ಡಿಮಾಂಡಪ್ಪೋ ಡಿಮ್ಯಾಂಡ್!!

#ramojiraofilmcity, #balkaninews #filmnews, #kannadasuddigalu, #kurukstra, #bharate, #srimuruli

Tags