ಸುದ್ದಿಗಳು

ನಿಜವಾದ ಗಂಡಸು ಎಂದು ಪ್ರೂವ್ ಮಾಡಲು ಮದ್ಯ ಬೇಕಿಲ್ಲ: ಕಿಚ್ಚ ಸುದೀಪ್

ಸ್ಯಾಂಡಲ್ ವುಡ್ ಕಿಚ್ಚ ಸಾಮಾಜಿಕ ಜಾಲತಾಣದಲ್ಲಿ ಅಭಿಮಾನಿಗಳ ಜೊತೆ ಮಾತುಕತೆ ನಡೆಸುತ್ತಿರುವ ಸುದೀಪ್ ಬಹಳ ಅರ್ಥಗರ್ಭಿತವಾದ ವಾಕ್ಯವನ್ನು ಟ್ವೀಟ್ ಮಾಡಿದ್ದಾರೆ.

“ನಿಜವಾದ ಗಂಡಸು ಎಂದು ಪ್ರೂವ್ ಮಾಡಲು ಮದ್ಯ ಬೇಕಿಲ್ಲ. ಸೂರ್ಯ ಮುಳುಗುವುದು ಬೇಕಾಗಿಲ್ಲ”ಎಂದು ಬರೆದಿರುವ ಸಾಲನ್ನು ನಾನು ಓದಿದೆ ಎಂದು ಸುದೀಪ್ ಟ್ವೀಟ್ ಮಾಡಿದ್ದಾರೆ.

ಟ್ವೀಟ್‍ನಲ್ಲಿ ತಮ್ಮ ಚಿತ್ರವಿರುವ ಫೋಟೋ ಒಂದನ್ನು ಅಪ್ಲೋಡ್ ಮಾಡಿದ್ದಾರೆ. ಈ ಫೋಟೋದಲ್ಲಿ “ನಾನು ಹೋರಾಟ ಮಾಡಬೇಕು ಎನ್ನುವ ಕಾರಣಕ್ಕೆ ಹೋರಾಟ ಮಾಡುವುದಿಲ್ಲ. ಎದುರಾಳಿಯೊಬ್ಬ ಅರ್ಹನಿದ್ದರೆ ಮಾತ್ರ ಅಖಾಡಕ್ಕೆ ಇಳಿಯುತ್ತೇನೆ” ಎನ್ನುವ ವಾಕ್ಯವಿದೆ. ಇಂದು ಮಧ್ಯಾಹ್ನ ಸುದೀಪ್ ಪೈಲ್ವಾನ್ ಕಿಚ್ಚಾ ಹ್ಯಾಶ್ ಟ್ಯಾಗ್ ಬಳಸಿ ಟ್ವೀಟ್ ಮಾಡಿದ್ದಾರೆ. ಕಿಚ್ಚ ಟ್ವೀಟ್ ಮೂಲಕ ಟಾಂಗ್ ಕೊಟ್ರಾ ಎನ್ನುವ ಪ್ರಶ್ನೆ ಎಲ್ಲರನ್ನು ಕಾಡುತ್ತಿದೆ.

ಮುದ್ದಿನ ಮಗಳೊಂದಿಗೆ ಲೂಸ್ ಮಾದ ಯೋಗಿ

#kicchasudeep #karunadchakravarthy #sudeeptweet #twitter

Tags