ಸುದ್ದಿಗಳು

ಆಸ್ಪತ್ರೆಯಿಂದ ಡಿಸ್ಚಾರ್ಜ್ ಆದ ಶಿವರಾಜ್ ಕುಮಾರ್

ವೈದ್ಯರ ಸಲಹೆ ಮೇರೆಗೆ ಎರಡು ದಿನ ಆಸ್ಪತ್ರೆಯಲ್ಲೇ ಚಿಕಿತ್ಸೆ ಪಡೆದಿದ್ದ ಶಿವಣ‍್ಣ

ಬೆಂಗಳೂರು, ಅ.17: ವಿಪರೀತ ಜ್ವರದಿಂದ ಬಳಲುತ್ತಿದ್ದ ನಟ ಶಿವರಾಜ್ ಕುಮಾರ್ ಮೊನ್ನೆಯಷ್ಟೇ ಬೆಂಗಳೂರಿನ ಮಲ್ಯ ಆಸ್ಪತ್ರೆಗೆ ದಾಖಲಾಗಿದ್ದರು. ವೈದ್ಯರ ಸಲಹೆ ಮೇರೆಗೆ ಎರಡು ದಿನಗಳ ಕಾಲ ಆಸ್ಪತ್ರೆಯಲ್ಲೇ ಚಿಕಿತ್ಸೆ ಪಡೆದ ಅವರು, ವೈದ್ಯರ ಸಲಹೆ ಮೇರೆಗೆ ಮನೆಗೆ ತೆರಳಿದ್ದಾರೆ.

ಆರೋಗ್ಯದಲ್ಲಿ ಚೇತರಿಕೆ

ಕಳೆದ ಮೂರನೇ ದಿನವೂ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಶಿವಣ್ಣ ಇಂದು ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ. ಆರೋಗ್ಯದಲ್ಲಿ ಚೇತರಿಕೆ ಕಂಡು ಗುಣಮುಖವಾಗಿರುವ ಅವರನ್ನು ಇಂದು ವೈದ್ಯರು ಡಿಸ್ಚಾರ್ಜ್ ಮಾಡಿದರು.

ಡಾಕ್ಟರ್ ಸಲಹೆ

ಆಸ್ಪತ್ರೆಯಿಂದ ಡಿಸ್ಚಾರ್ಜ್ ಆದ ಶಿವಣ‍್ಣ ನಾಳೆ ಅಭಿಮಾನಿಗಳ ಜೊತೆ ಸಿನಿಮಾ ನೋಡುವ ಸಾಧ್ಯತೆ ಇದೆ. ನಾಳೆ ‘ದಿ ವಿಲನ್’ ಸಿನಿಮಾ ರಿಲೀಸ್ ಆಗಲಿದೆ. ಇನ್ನು ಈ ವೇಳೆ ಮಾತನಾಡಿದ ಅವರು”ದಿ ವಿಲನ್ ಸಿನಿಮಾ ನೋಡಲು ನನಗೂ ಕುತೂಹಲ ಇದೆ. ಯಾವುದೇ ರೀತಿಯ ಫುಡ್ ಡಯಟ್, ಶೂಟಿಂಗ್ ರಿಸ್ಟ್ರಿಕ್ಷನ್ ಇಲ್ಲ ಅಂತ ವೈದ್ಯರು ಸಲಹೆ ನೀಡಿದ್ದಾರೆ” ಎಂದು ಹೇಳಿದ್ದಾರೆ.

ಮುಂದಿನ ಸಿನಿಮಾಗಳು

‘ದಿ ವಿಲನ್’ ಚಿತ್ರದ ನಂತರ ಅವರು ‘ದ್ರೋಣ’ ಚಿತ್ರದ ಚಿತ್ರೀಕರಣದಲ್ಲಿ ಪಾಲ್ಗೊಳ್ಳಲಿದ್ದಾರೆ. ನಾಳೆ ಸಂಜೆ ಅಥವಾ ನಾಳಿದ್ದು ಮೈಸೂರು ದಸರಾ ಉತ್ಸವದಲ್ಲಿಯೂ ಭಾಗವಹಿಸುತ್ತಿದ್ದಾರೆ.

Tags