ಸುದ್ದಿಗಳು

ಕೆಂಪೇಗೌಡ ಪ್ರಶಸ್ತಿ ಪ್ರಧಾನ ಸಮಾರಂಭದಲ್ಲಿ ಭಾಗಿಯಾಗದ ಸುದೀಪ್

ರಮೇಶ್ ಅರವಿಂದ್, ದರ್ಶನ್, ಸುದೀಪ್, ಹಾಗೂ ಸೃಜನ್ ಅವರಿಗೆ ಲಭಿಸಿದ ಕೆಂಪೇಗೌಡ ಪ್ರಶಸ್ತಿ

ಸಮಾಜ ಸೇವೆ, ಸಾಹಿತ್ಯ, ಚಲನ ಚಿತ್ರ, ಪತ್ರಿಕೋದ್ಯಮ, ವೈದ್ಯಕೀಯ, ರಂಗಭೂಮಿ, ನೃತ್ಯ, ಸಂಗೀತ ಸೇರಿದಂತೆ ವಿವಿಧ ರಂಗದಲ್ಲಿ ಸಾಧನೆ ಮಾಡಿದವರಿಗೆ ಬಿಬಿಎಂಪಿ ಕೆಂಪೇಗೌಡ ಪ್ರಶಸ್ತಿ ನೀಡುತ್ತಾ ಬಂದಿದೆ.

ಬೆಂಗಳೂರು, ಸ.02: 2018ನೇ ಸಾಲಿನ ಕೆಂಪೇಗೌಡ ಪ್ರಶಸ್ತಿಯನ್ನು ಕನ್ನಡದ ಕಲಾವಿದರುಗಳಾದ ರಮೇಶ್ ಅರವಿಂದ್, ದರ್ಶನ್, ಸುದೀಪ್, ಸೃಜನ್ ಲೋಕೇಶ್ ಅವರುಗಳಿಗೆ ಲಭಿಸಿತ್ತು. ನಿನ್ನೆ ಸಂಜೆ 6 ಗಂಟೆಗೆ ಬಿಬಿಎಂಪಿ ಪ್ರಧಾನ ಕಚೇರಿ ಆವರಣದಲ್ಲಿ ಡಾ. ರಾಜ್ ಕುಮಾರ್ ಗಾಜಿನ ಮನೆಯಲ್ಲಿ ಪ್ರಶಸ್ತಿ ಪ್ರದಾನ ನಡೆಯಿತು.

ಮುಖ್ಯಮಂತ್ರಿ ಹೆಚ್.ಡಿ ಕುಮಾರಸ್ವಾಮಿ ಮತ್ತು ಡಿಸಿಎಂ ಡಾ. ಜಿ. ಪರಮೇಶ್ವರ್ ಅವರು ಪ್ರಶಸ್ತಿ ಪ್ರದಾನ ಮಾಡಿದ್ದು, ಈ ಪ್ರಶಸ್ತಿಯು 25ಸಾವಿರ ರೂಪಾಯಿ ನಗದು ಹಾಗೂ ಫಲಕವನ್ನು ಒಳಗೊಂಡಿದೆ. ಈ ಕಾರ್ಯಕ್ರಮಕ್ಕೆ ಪಾಲಿಕೆ ಮೇಯರ್, ಕಮೀಷನರ್, ಸ್ಥಾಯಿ ಸಮಿತಿ ಅಧ್ಯಕ್ಷರು, ರಾಜ್ಯ ಸಭಾ ಸದಸ್ಯರು ಸೇರಿದಂತೆ, ಪಾಲಿಕೆ ಸದಸ್ಯರು, ಅಧಿಕಾರಿಗಳು ಭಾಗವಹಿಸಿದರು.

ಪ್ರಶಸ್ತಿ ಪುರಸ್ಕೃತರು

ಖ್ಯಾತ ಕೃಷಿ ತಜ್ಞರಾದ ಪದ್ಮಭೂಷಣ ಮಹದೇವಪ್ಪ, ಖ್ಯಾತ ಚಿತ್ರ ನಟರಾದ ಸುದೀಪ್, ರಮೇಶ್ ಅರವಿಂದ್, ಸೃಜನ್ ಲೋಕೇಶ್, ಖ್ಯಾತ ನಿರ್ದೇಶಕರಾದ ಟಿ ಎನ್ ಸೀತಾರಾಂ, ಬಿ. ಸುರೇಶ್, ಫಸ್ಟ್ ನ್ಯೂಸ್ ಪ್ರಧಾನ ಸಂಪಾದಕರಾದ ಎಸ್. ಹೆಚ್. ಮಾರುತಿ ಹಾಗೂ ಮೆಟ್ರೋ ವಿಭಾಗದ ಮುಖ್ಯಸ್ಥ, ಸೀನಿಯರ್ ಆ್ಯಂಕರ್ ಸೋಮಣ್ಣ ಮಾಚಿಮಾಡ ಸೇರಿದಂತೆ ಇನ್ನೂ ಹಲವು ಸಂಸ್ಥೆಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ಹಿರಿಯ ಪತ್ರಕರ್ತರು ಹಾಗೂ ವಿವಿಧ ಕ್ಷೇತ್ರಗಳಲ್ಲಿ ಸಾಧನೆ ಮಾಡಿರುವ 278 ಗಣ್ಯರು 2018ನೇ ಸಾಲಿನ ಕೆಂಪೇಗೌಡ ಪ್ರಶಸ್ತಿಗೆ ಭಾಜನರಾಗಿದ್ದಾರೆ.

ಗೈರು ಹಾಜರಾದ ಸುದೀಪ್

ಕೆಂಪೇಗೌಡ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ, ಇವತ್ತು ನಟ ಸುದೀಪ್ ಭಾಗಿಯಾಗಿರಲಿಲ್ಲ.. 2018ನೇ ಸಾಲಿನ ಕೆಂಪೇಗೌಡ ಪ್ರಶಸ್ತಿ ಅವರಿಗೆ ಘೋಷಣೆಯಾಗಿದ್ದರೂ ಕೂಡ, ಪ್ರಶಸ್ತಿ ಸ್ವೀಕರಿಸಲು ಅವರು ಹೋಗಿಲ್ಲ. ಬೆಂಗಳೂರಿನಲ್ಲಿಯೇ ಕಾರ್ಯಕ್ರಮ ನಡೆದಿದ್ದರೂ ಅವರು ಯಾಕೆ ಯಾಕೆ ಹೋಗಿಲ್ಲ ಅನ್ನುವುದು ಚರ್ಚೆಗೀಡು ಮಾಡಿದೆ.

ಆದರೆ, ಸೃಜನ್ ಲೋಕೇಶ್ ಮಾತ್ರ ಪ್ರಶಸ್ತಿ ಸ್ವೀಕರಿಸಲು ಸಮಾರಂಭಕ್ಕೆ ಬಂದಿದ್ದರು. ಇದೇ ಸಂದರ್ಭದಲ್ಲಿ ದರ್ಶನ್ ಮತ್ತು ತಾವು ಪಾಲಿಕೆ ಪೌರ ಕಾರ್ಮಿಕರ ಕಲ್ಯಾಣಕ್ಕಾಗಿ ವೈಯಕ್ತಿಕವಾಗಿ ತಲಾ 50 ಸಾವಿರ ರೂ. ನೀಡುವುದಾಗಿ ಸೃಜನ್ ಪ್ರಕಟಿಸಿದರು.

Tags