ಸುದ್ದಿಗಳು

ಶ್ರೀಗಳು ಶಿವೈಕ್ಯ: ಕಂಬನಿ ಮಿಡಿಯುತ್ತಿರುವ ಚಿತ್ರರಂಗದ ಕಲಾವಿದರು ಮತ್ತು ತಂತ್ರಜ್ಞರು

ನಡೆದಾಡುವ ದೇವರ ಪಯಣ ಈಗ ದೇವರತ್ತ

ಬೆಂಗಳೂರು.ಜ.21

: ಕರ್ನಾಟಕ ರತ್ನ, ತ್ರಿವಿಧ ದಾಸೋಹಿ, ನಡೆದಾಡುವ ದೇವರು ಎಂದೇ ಖ್ಯಾತಿಗಳಿಸಿಕೊಂಡಿದ್ದ ಸಿದ್ಧಗಂಗಾ ಮಠದ ಶ್ರೀ ಶಿವಕುಮಾರ ಸ್ವಾಮೀಜಿ (111) ಅವರು ಇಂದು ಬೆಳಗ್ಗೆ 11.44ಕ್ಕೆ ಕೊನೆಯುಸಿರೆಳೆದಿದ್ದಾರೆ.

ಕಂಬನಿ ಮಿಡಿದ ಚಿತ್ರರಂಗ

ಶ್ರೀಗಳು ಶಿವೈಕ್ಯರಾದ ಕಾರಣ, ನಾಳೆ ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿ ಬಂದ್ ಘೋಷಿಸಿದೆ. ನಾಳೆ ಯಾವುದೇ ಸಿನಿಮಾಗಳ ಪ್ರದರ್ಶನ ಮತ್ತು ಚಿತ್ರೀಕರಣ ನಡೆಯುವುದಿಲ್ಲ ಅಂತಾ ವಾಣಿಜ್ಯ ಮಂಡಳಿ ಅಧ್ಯಕ್ಷರು ತಿಳಿಸಿದ್ದಾರೆ.

“ಸಿದ್ಧಗಂಗೆಯ ಶ್ರೀ ಶ್ರೀ ಶ್ರೀ ಶಿವಕುಮಾರ ಸ್ವಾಮೀಜಿ ಅವರು ಇಂದು ಬೆಳಗ್ಗೆ 11.44 ನಿಮಿಷಕ್ಕೆ ಶಿವೈಕ್ಯರಾಗಿದ್ದಾರೆ. ಇಂದು ಸಂಜೆ 5 ಗಂಟೆಯಿಂದ ಅವರ ಅಂತಿಮ ದರ್ಶನಕ್ಕೆ ಅವಕಾಶ ಮಾಡಿಕೊಡಲಾಗುತ್ತಿದೆ” ಎಂದು ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ಅವರು ತಿಳಿಸಿದ್ದಾರೆ.

ವಯೋಸಹಜ ಅನಾರೋಗ್ಯದಿಂದ ಬಳಲುತ್ತಿದ್ದ ಶ್ರೀಗಳು ಕಳೆದ ತಿಂಗಳು ಚೆನ್ನೈ ಆಸ್ಪತ್ರೆಯೊಂದರಲ್ಲಿ ಹೃದಯ ಶಸ್ತ್ರಚಿಕಿತ್ಸೆಗೊಳಗಾಗಿದ್ದರು. ನಂತರ ಸಿದ್ಧಗಂಗಾ ಮಠಕ್ಕೆ ವಾಪಸ್ ಆಗಿದ್ದ ಶ್ರೀಗಳ ಆರೋಗ್ಯದಲ್ಲಿ ಚೇತರಿಕೆ ಕಂಡಿತ್ತು.
ಭಾನುವಾರ ಮತ್ತೆ ಶ್ರೀಗಳ ಆರೋಗ್ಯದಲ್ಲಿ ವ್ಯತ್ಯಾಸ ಕಂಡ ಹಿನ್ನೆಲೆ ಚಿಕಿತ್ಸೆ ಮುಂದುವರಿಸಲಾಗಿತ್ತು. ಅಂತಿಮವಾಗಿ ಚಿಕಿತ್ಸೆ ಫಲಕಾರಿಯಾಗದೇ ಶ್ರೀಗಳು ಇಂದು ಲಿಂಗೈಕರಾಗಿದ್ದಾರೆ. ಕೋಟ್ಯಾಂತರ ಭಕ್ತರನ್ನು ಅಗಲಿದ ಆ ನಡೆದಾಡುವ ದೇವರಿಗೆ ಭಕ್ತಗಣ ಸಂತಾಪ ಸೂಚಿಸಿದೆ.

ಸಂತಾಪ ಸೂಚಿಸಿ ಟ್ವೀಟ್ ಮಾಡಿದ ಕೆಲವು ಕಲಾವಿದರು ಮತ್ತು ತಂತ್ರಜ್ಞರು

#swamiji, #balakninews #filmnews, #sudeep, #jaggesh

Tags

Related Articles